ಬಾಗಲಕೋಟೆ ಜಿಲ್ಲಾದ್ಯಂತ ೧೯೬ ಗ್ರಾಪಂ ವ್ಯಾಪ್ತಿಯಲ್ಲಿ ವಿಬಿ ಜಿ ರಾಮ್ ಜಿ ಜಾಗೃತಿ ಅಭಿಯಾನದ ಅಂಗವಾಗಿ ಶನಿವಾರ ತಾಲೂಕಿನ ಮುರನಾಳ ಆರ್.ಸಿ. ಕೇಂದ್ರದಲ್ಲಿ ಜಿಲ್ಲಾಽಕಾರಿ ಸಂಗಪ್ಪ ಹಾಗೂ ಜಿಪಂ ಸಿಇಒ ಗಜಾನನ ಬಾಲೆ ಅವರು ಬೈಕ್ ಮೂಲಕ ಗ್ರಾಮದಲ್ಲಿ ಸಂಚರಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಕುಟುಂಬಗಳು ತಮ್ಮ ಜೀವನೋಪಾಯವನ್ನು ಸುಸ್ಥಿರಗೊಳಿಸಿಕೊಳ್ಳಲು ಹಾಗೂ ಜಲ ಭದ್ರತೆಗೆ ಅಗತ್ಯವಾದ ಆಸ್ತಿಗಳನ್ನು ನಿರ್ಮಿಸಿಕೊಳ್ಳಲು ವಿಬಿ ಜಿ ರಾಮ್ ಜಿ ಯೋಜನೆ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಜಿಲ್ಲಾಽಕಾರಿ ಸಂಗಪ್ಪ ಸಲಹೆ ನೀಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕಾ ಪಂಚಾಯಿತಿ ಮಾಹಿತಿ, ಶಿಕ್ಷಣ, ಸಂವಹನ ಚಟುವಟಿಕೆಯಡಿ ಹಮ್ಮಿಕೊಂಡ ವಿಬಿ ಜಿ ರಾಮ್ ಜಿ ಜಾಗೃತಿ ಅಭಿಯಾನಕ್ಕೆ ಶನಿವಾರ ಮುರನಾಳ ಆರ್.ಸಿ ಕೇಂದ್ರದಲ್ಲಿ ಚಾಲನೆ ನೀಡಿ ಮಾತನಾಡಿದರು.
ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಆಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಅಭಿಯಾನ ಕೈಗೊಳ್ಳಲಾಗಿದೆ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ ಮಾತನಾಡಿ, ಜಿಲ್ಲೆಯ ೧೯೬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಜನರಿಗೆ ವಿಬಿ ಜಿ ರಾಮ್ ಜಿ ಯೋಜನೆಯಡಿ ದೊರೆಯುವ ಸೌಲಭ್ಯಗಳು, ಕೈಗೊಳ್ಳಬಹುದಾದ ಕಾಮಗಾರಿಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಯೋಜನೆಯ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು, ಗ್ರಾಮ ಮಟ್ಟದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಬಾಗಲಕೋಟೆ ತಾಪಂ ಕಾರ್ಯನಿರ್ವಾಹಕ ಅಽಕಾರಿ ಸುಭಾಷ ಸಂಪಗಾವಿ, ವಿಬಿ ಜಿ ರಾಮ್ ಜಿ ಯೋಜನೆಯ ಸಹಾಯಕ ನಿರ್ದೇಶಕ ನಕ್ಕರಗುಂದಿ, ತಾಪಂ ಸಹಾಯಕ ನಿರ್ದೇಶಕ ಪರಮೇಶ್ವರ ಚಲವಾದಿ, ತಾಲೂಕಾ ಯೋಜನಾಽಕಾರಿ ಚಂದ್ರು ಹೊಸಮನಿ, ಪಂಚಾಯಿತಿ ಅಭಿವೃದ್ಧಿ ಅಽಕಾರಿ ಸ್ವಪ್ನ ನಾಯಕ ಸೇರಿದಂತೆ ಇತರರು ಇದ್ದರು.
ಮುರನಾಳ ಆರ್.ಸಿ ಕೇಂದ್ರದಲ್ಲಿ ವಿಬಿ ಜಿ ರಾಮ್ ಜಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಜಿಲ್ಲಾಽಕಾರಿ ಸಂಗಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ಅವರು ಬೈಕ್ ಮೂಲಕ ಗ್ರಾಮದಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಈ ಮೂಲಕ ಗ್ರಾಮೀಣ ಜನರೊಂದಿಗೆ ನೇರವಾಗಿ ಬೆರೆತು ಯೋಜನೆ ಮಹತ್ವವನ್ನು ತಿಳಿಸುವ ಪ್ರಯತ್ನ ಮಾಡಿದರು.
ಮನೆ ಮನೆಗೆ ತೆರಳಿ ಕರಪತ್ರ ವಿತರಣೆ
ವಿಬಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ನಾಗರಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ಜಿಲ್ಲಾಽಕಾರಿ ಹಾಗೂ ಜಿಪಂ ಸಿಇಒ ಸೇರಿದಂತೆ ವಿವಿಧ ಅಽಕಾರಿಗಳು ಹಾಗೂ ಸಿಬ್ಬಂದಿ ಜೊತೆಗೆ ಮಾಹಿತಿ ನೀಡಲಾಯಿತು. ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳು, ಗ್ರಾಮೀಣ ಕುಟುಂಬಗಳ ಜೀವನೋಪಾಯ ಸುಧಾರಣೆ ಹಾಗೂ ಜಲ ಭದ್ರತೆಗೆ ಆಸ್ತಿಗಳನ್ನು ನಿರ್ಮಿಸಿಕೊಳ್ಳುವ ಕುರಿತು ವಿವರಿಸಿ, ಮಾಹಿತಿ ಒಳಗೊಂಡ ಕರಪತ್ರಗಳನ್ನು ಮನೆ ಮನೆಗೆ ವಿತರಿಸಿದರು.