ಕಮತಗಿ ಸಮೀಪದ ಶಿರೂರಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಎಸ್.ಟಿ. ಕರಲಿಂಗಣ್ಣವರು ಚಾಲನೆ ನೀಡಿದರು. ಆರೋಗ್ಯ ನಿರೀಕ್ಷಣಾಽಕಾರಿ ಕೆ.ಎಫ್. ಮಾಯಾಚಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಸ್.ಎಸ್. ಮೆಣಸಗಿ, ಶೈಲಾ ಹಿರೇಮಠ, ಎಸ್.ಎಸ್. ಮಂತ್ರಿ ಇದ್ದರು. 
ಬಾಗಲಕೋಟೆ

ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ

ಪ್ರಮುಖ ಮುಖ್ಯಾಂಶಗಳು

  • ಎಸ್.ಟಿ. ಕರಲಿಂಗಣ್ಣವರ ಅಭಿಮತ
  • ಶಿರೂರಿನಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ
ಕಮತಗಿ: 5 ವರ್ಷದೊಳಗಿನ ತಮ್ಮ ಎಲ್ಲ ಮಕ್ಕಳಿಗೆ ತಪ್ಪದೇ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಪಾಲಕರು ಸಹಕರಿಸಬೇಕು ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರು ಎಸ್.ಟಿ. ಕರಲಿಂಗಣ್ಣವರ ಹೇಳಿದರು.
ಸಮೀಪದ ಶಿರೂರಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪಟ್ಟಣ ಪಂಚಾಯಿತಿ ಹಾಗೂ ಶಿವಗಂಗಾ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರ, ಪ್ರಾಥಮಿಕ ಶಾಲೆ ಆಶ್ರಯ ಕಾಲನಿಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೂ. 28ರಂದು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೋ ಒಂದು ಭಯಾನಕ ರೋಗ ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟು ಮಾಡುತ್ತದೆ. ಆದ್ದರಿಂದ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡು ಬರುತ್ತದೆ. 5 ವರ್ಷದ ಒಳಗಿನ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿ ಪೋಲಿಯೋ ಹನಿಗಳನ್ನು ನೀಡಬೇಕು ಎಂದರು.
ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎಫ್.ಮಾಯಾಚಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಸ್.ಎಸ್. ಮೆಣಸಗಿ, ಶಿಕ್ಷಕಿಯರಾದ ಶೈಲಾ ಹಿರೇಮಠ, ಎಸ್.ಎಸ್.ಮಂತ್ರಿ ಹಾಗೂ ಶಿವಗಂಗಾ ಆಸ್ಪತ್ರೆಯ ಸಂತೋಷಕುಮಾರ ಕೊರ್ತಿ, ಈರಣ್ಣ ಬಿದರಿ ಇದ್ದರು.