ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಯೋಗ ದಿನಾಚರಣೆಯನ್ನು ಸಂಸದ ಪಿ.ಸಿ.ಗದ್ದಿಗೌಡರ ಉದ್ಘಾಟಿಸಿದರು. ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಽಕಾರಿ ಸಂಗಪ್ಪ, ಎಸ್ಪಿ ಸಿದ್ಧಾರ್ಥ ಗೋಯಲ್ ಮತ್ತಿತರರು ಇದ್ದರು. 
ಬಾಗಲಕೋಟೆ

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗ ಅವಶ್ಯ

ಬಾಗಲಕೋಟೆ: ಒತ್ತಡ ರಹಿತ ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅವಶ್ಯವಾಗಿದೆ ಎಂದು ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಆಯುಷ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ೧೨ನೇ ಅಂತರರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯೋಗವು ಭಾರತೀಯ ಪ್ರಾಚೀನ ಪರಂಪರೆಯ ಅಮೂಲ್ಯ ಕೊಡುಗೆಯಾಗಿದೆ. ಇದನ್ನು ಪ್ರಪಂಚಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜೂನ್ ೨೧ ರಂದು ವಿಶ್ವ ಯೋಗ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಪ್ರತಿಯೊಬ್ಬರೂ ದಿನನಿತ್ಯ ಯೋಗವನ್ನು ಜೀವನಶೈಲಿಯ ಭಾಗವಾಗಿ ಮಾಡಿಕೊಂಡಾಗ ಮಾತ್ರ ಉತ್ತಮ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಚಿಕ್ಕಂದಿನಿAದಲೇ ಯೋಗಭ್ಯಾಸವನ್ನು ರೂಪಿಸಿಕೊಳ್ಳಬೇಕು. ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ದಿನನಿತ್ಯದ ಕಾರ್ಯ ಚಟುವಟಿಕೆಯಲ್ಲಿ ಲವಲವಿಕೆಯಿಂದ ಇರಲು ಸಾಧ್ಯ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ದೇಹ, ಮನಸ್ಸು ಹಾಗೂ ಆದ್ಯಾತ್ಮಿಕ ಬದುಕನ್ನು ಒಗ್ಗೂಡಿಸಿಕೊಂಡು ಬದುಕು ಸಾಗಿಸುವಂತಹ ಕಲೆ ನಮ್ಮ ದೇಶದಲ್ಲಿ ಹುಟ್ಟಿಕೊಂಡಿದೆ. ಇದನ್ನು ಋಷಿ ಮುನಿಗಳು ಅಭ್ಯಾಸ ಮಾಡಿ ಸಾರ್ಥಕಗೊಳಿಸಿ ರೂಪಿಸಿದ ಬದುಕಿನ ಪದ್ದತಿಯಾಗಿದೆ. ಅದನ್ನು ನಾವೆಲ್ಲರೂ ಅನುಸರಿಸುವಂತೆ ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ವೈಚಾರಿಕ ದೃಷ್ಠಿಕೋನ ಇಟ್ಟುಕೊಂಡು ಯೋಗ ದಿನಾಚರಣೆ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ ಎಂದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ಜನ ಇಂದು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಇಡೀ ಜಗತ್ತೇ ಯೋಗದ ಕಡೆ ಹೋಗುತ್ತಿದೆ. ಅನೇಕ ರೋಗಗಳು ಯೋಗದಿಂದಲೇ ಕಡಿಮೆ ಆಗುತ್ತಿವೆ. ಅಲೋಪತಿಗೆ ೨೦೦ ವರ್ಷಗಳ ಇತಿಹಾಸ ಇರಬಹುದು ಆದರೆ ಅದಕ್ಕೂ ಮುಂಚೆನೆ ಆರ್ಯುವೇದ ಪ್ರಚಲಿತದಲ್ಲಿದೆ. ಯೋಗವು ದೈಹಿಕ ಆರೋಗ್ಯ ವೃದ್ಧಿಸುವುದರ ಜೊತೆಗೆ ಮಾನಸಿಕ ನೆಮ್ಮದಿ, ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಆದ್ದರಿಂದ ಪ್ರತಿದಿನ ಯೋಗಾಭ್ಯಾಸವನ್ನು ರೂಡಿಸಿಕೊಳ್ಳಬೇಕು ಎಂದರು.
ಜಿಲ್ಲಾಽಕಾರ ಸಂಗಪ್ಪ ಮಾತನಾಡಿ, ಯೋಗವು ಆರೋಗ್ಯಕರ ಜೀವನಶೈಲಿಯ ಮಾರ್ಗವಾಗಿ ಗುರುತಿಸಿಕೊಂಡಿದ್ದು, ನಿಯಮಿತ ಯೋಗಾಭ್ಯಾಸದಿಂದ ಅನೇಕ ರೋಗಗಳನ್ನು ತಡೆಗಟ್ಟಲು ಸಾಧುವಾಗುತ್ತದೆ ಎಂದರು.
ಜಿಲ್ಲಾ ಆಯುಷ ಅಽಕಾರಿ ಡಾ.ಎಸ್.ಜಿ.ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಸಾಮೂಹಿಕ ಯೋಗಾಭ್ಯಾಸ ಮಾಡಿಸಲಾಯಿತು. ಶಿರೂರಿನ ವಿಜಯ ಮಹಾಂತ ತೀರ್ಥದ ಡಾ.ಬಸವಲಿಂಗ ಶ್ರೀಗಳು ಸಾನಿಧ್ಯ ವಹಿಸಿ, ಯೋಗದ ಮಹತ್ವವನ್ನು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ, ಉಪ ಅರಣ್ಯ ಸಂರಕ್ಷಾಽಕಾರಿ ಸ್ವಪ್ನಿಲ್ ಅಹಿರೇ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಮಂಜುನಾಥ ಡಿ.ಎನ್, ತಹಶೀಲ್ದಾರ ವಾಸುದೇವ ಸ್ವಾಮಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಇತರರು ಉಪಸ್ಥಿತರಿದ್ದರು.