ಹುನಗುಂದದ ಗುರು ಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಹುನಗುಂದ ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ಇಳಕಲ್ ತಹಸೀಲ್ದಾರ್ ಅಮರೇಶ ಪಮ್ಮಾರ, ಅಮರೇಶ ನಾಗೂರ ಇತರರಿದ್ದರು. 
ಬಾಗಲಕೋಟೆ

ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯವಾಗಲಿ

ಬಿಇಒ ಜಾಸ್ಮಿನ್ ಕಿಲ್ಲೇದಾರ ಹೇಳಿಕೆ

ಹುನಗುಂದ: ಕನ್ನಡ ನಾಡಿನ ಪ್ರತಿಯೊಬ್ಬರು ಕನ್ನಡಿಗರು ನೆಲೆ, ಜಲ ಹಾಗೂ ಭಾಷೆಯನ್ನು ಉಳಿಸಿ ಬೆಳೆಸುವ ಆದ್ಯ ಕರ್ತವ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ಹೇಳಿದರು.

ಪಟ್ಟಣದ ಗುರು ಭವನದಲ್ಲಿ ಹುನಗುಂದ ಮತ್ತು ಇಳಕಲ್ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ವತಿಯಿಂದ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ತಾಯಿ ಭಾಷೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ಭಾಷೆ ಹೆಚ್ಚಾಗಿದೆ. ಪಾಲಕರು ಮನೆಯಿಂದಲೇ ಕನ್ನಡ ಬೆಳೆಸುವ ಕಾರ್ಯ ಮಾಡಬೇಕು. ಇದರೊಂದಿಗೆ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ ಎಂದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಧ್ಯಾಪಕ ಎಲ್.ಜಿ. ಗಗ್ಗರಿ ಉಪನ್ಯಾಸ ನೀಡಿದರು

ಹುನಗುಂದ ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ಇಳಕಲ್ ತಹಸೀಲ್ದಾರ್ ಅಮರೇಶ ಪಮ್ಮಾರ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಶ್ರೀದೇವಿ ನಿಡಗುಂದಿ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಅಮರೇಶ ನಾಗೂರ, ಎಸ್.ಕೆ. ಕೊನೆಸಾಗರ, ಸಿದ್ಧಲಿಂಗಪ್ಪ ಬೀಳಗಿ, ಕರವೇ ಅಧ್ಯಕ್ಷ ಶರಣು ಗಾಣಿಗೇರ ಇತರರಿದ್ದರು. ಮಾಹದೇವ ಕಂಬಾಗಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಸಜ್ಜನ ವಂದಿಸಿದರು.