ಕೆರೂರ ಪಟ್ಟಣದಲ್ಲಿ ಧರಣಿ ನಡೆಸುತ್ತಿರುವ ರೈತರ ಸಮಸ್ಯೆಗಳನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹಾಗೂ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ ಆಲಿಸಿದರು. ಡಾ. ಎಂ.ಜಿ. ಕಿತ್ತಲಿ, ಟೋಪೇಶ ಬದಾಮಿ, ಭದ್ರಪ್ಪ ಜಲಗೇರಿ, ಹನಮಂತ ಪ್ರಭಾಕರ, ಶರಣು ಸಜ್ಜನ, ರಮೇಶ ಕೊಣ್ಣೂರ ಸೇರಿ ರೈತ ಮುಖಂಡರಾದ ಗೋವಿಂದಪ್ಪ ಬೆಳಗಂಟಿ ಇತರರಿದ್ದರು. 
ಬಾಗಲಕೋಟೆ

ಕೆರೂರ ಏತ ನೀರಾವರಿ ಯೋಜನೆಗೆ ಶೀಘ್ರ ಚಾಲನೆ

ಶಾಸಕ ಚಿಮ್ಮನಕಟ್ಟಿ ಭರವಸೆ

ರೈತರು, ಧರಣಿ ಕೈಬಿಡಲು ಮನವಿ

ಕೆರೂರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಅಂಬೇಡ್ಕರ್ ವತ್ತದ ಬಳಿ ಕಳೆದ ಐದು ದಿನಗಳಿಂದ ರೈತರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಬುಧವಾರ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.

ಕೆರೂರ ಸೇರಿ ಸುತ್ತಮುತ್ತಲಿನ ಗ್ರಾಮಗಳ ನೀರಾವರಿ ಅಗತ್ಯಗಳನ್ನು ಪೂರೈಸುವ ಮಹತ್ವದ ಯೋಜನೆಯಾದ ಕೆರೂರ ಏತ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಮತ ಹಸ್ತದಿಂದ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಚಿಮ್ಮನಕಟ್ಟಿ ತಿಳಿಸಿದರು.

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವ ಕುರಿತು ಮುಖ್ಯಮಂತ್ರಿ ನೇತತ್ವದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತ ಮುಖಂಡರೊಂದಿಗೆ ಚರ್ಚಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಆದರೆ, ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದರು.

ರೈತರ ಇತರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಭರವಸೆ ನೀಡಿದ ಅವರು, ಧರಣಿಯನ್ನು ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದರು.

ರೈತರ ಸಮಸ್ಯೆಗೆ ತುರ್ತು ಪರಿಹಾರಕ್ಕೆ ಆಗ್ರಹ

ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ, ಬೆಳಗಾವಿಯಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಿಂದ ರೈತರಿಗೆ ನಿರೀಕ್ಷಿತ ಲ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಮತ್ತು ಕಾರ್ಖಾನೆಗಳ ಮಾಲೀಕರ ನಡುವೆ ಸಮರ್ಪಕ ಒಪ್ಪಂದವಾಗದಿರುವುದರಿಂದ ರೈತರು ಆತಂಕದಲ್ಲಿದ್ದಾರೆ. ಕಬ್ಬು ಕಟಾವು ವಿಳಂಬವಾದರೆ ಬೆಳೆ ನಷ್ಟದ ಜತೆಗೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ರೈತರಿಗೆ ಘೋಷಿಸಲಾದ 2,500 ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದು ಪ್ರಸ್ತಾಪಿಸಿದ ಅವರು, ರೈತರ ಸಮಸ್ಯೆಗಳ ವಿಚಾರದಲ್ಲಿ ರಾಜಕೀಯ ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಸರ್ಕಾರ ರೈತರ ಅಹವಾಲು ಆಲಿಸಿ ಸ್ಪಷ್ಟ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.

ಡಾ. ಎಂ.ಜಿ. ಕಿತ್ತಲಿ, ಟೋಪೇಶ ಬದಾಮಿ, ಭದ್ರಪ್ಪ ಜಲಗೇರಿ, ಹನಮಂತ ಪ್ರಭಾಕರ, ಶರಣು ಸಜ್ಜನ, ರಮೇಶ ಕೊಣ್ಣೂರ ಸೇರಿ ರೈತ ಮುಖಂಡರಾದ ಗೋವಿಂದಪ್ಪ ಬೆಳಗಂಟಿ, ಸುರೇಶ ಪೂಜೇರಿ, ಹುಸೇನಸಾಬ ಮಾಲದಾರ ಹಾಗೂ ಇತರರು ಉಪಸ್ಥಿತರಿದ್ದರು.