ಮುಧೋಳ: ಕನ್ನಡ ಭಾಷೆ, ನಾಡು, ನುಡಿ ಮತ್ತು ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕನ್ನಡ ಭಾಷೆ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ತಹಸೀಲ್ದಾರ್ ಡಾ. ಚಿಕ್ಕಪ್ಪ ನಾಯಕ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ ಸಭಾಭವನದಲ್ಲಿ ನಗರಸಭೆ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಗೆ ದೊಡ್ಡ ಪರಂಪರೆ, ಇತಿಹಾಸವಿದೆ. ದೇಶವ್ಯಾಪಿ ತನ್ನ ವಿಸ್ತಾರ ಹೊಂದಿದೆ. ಕನ್ನಡ ರಾಜ, ಮಹರಾಜರ ಕೊಡುಗೆ ದೇಶದ ಇತಿಹಾಸ ಪುಟದಲ್ಲಿ ಅಚ್ಚಳಿಯದೇ ಉಳಿದಿದೆ ಎಂದರು.
ನಿವೃತ್ತ ಪ್ರಾಧ್ಯಾಪಕ ಬಿ.ಎಲ್.ಮಾಳಿ ಉಪನ್ಯಾಸ ನೀಡಿ ಕನ್ನಡವೆಂದರೆ ಕೇವಲ ಭಾಷೆಯಲ್ಲ, ಅದು ನಮ್ಮ ಬದುಕು, ಸಂಸ್ಕೃತಿ, ಪರಂಪರೆ ಮತ್ತು ಆತ್ಮಗೌರವದ ಸಂಕೇತವಾಗಿದೆ ಎಂದು ಹೇಳಿದರು.
ಎಂ.ಎಂ.ನದ್ಾ, ಡಾ.ಕೆ. ಎಲ್.ಉದಪುಡಿ, ಶ್ರೀಕಾಂತ ಮೇಗಾಡಿ, ಡಾ.ಉದಯ ನಾಯಕ, ಡಾ.ಸಂಜಯ್ ಗಾರಗೆ, ಡಾ.ಎ.ಎಂ. ದೋಣಿ ಸೇರಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ನಗರಸಭೆ ಆಯುಕ್ತ ಗೋಪಾಲ ಖಾಸೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಮುಲ್ಲಾ, ತಾ.ಪಂ ಇಒ ರಾಘವೇಂದ್ರ ಕಳ್ಳಿಮನಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಆನಂದ ಪೂಜಾರಿ, ರಮೇಶ ನಿಡೋಣಿ, ಗಣಪತಿ ಭೋವಿ, ಸಂಗಪ್ಪ ಇಮ್ಮನವರ ಇತರರಿದ್ದರು.