73ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ, 11 ಹೊಸ ಪಿಕೆಪಿಎಸ್ ಸಂಘಗಳ ಸ್ಥಾಪನೆ,
ಹುನಗುಂದ: ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರು, ಬಡವರು, ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳ ಆರ್ಥಿಕ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಸಹಕಾರ ತತ್ವದಡಿ ಜಾತಿ, ಮತ, ಪಂಥದ ಭೇದವಿಲ್ಲದೆ ಎಲ್ಲರಿಗೂ ಆರ್ಥಿಕ ನೆರವು ಒದಗಿಸುತ್ತಿರುವುದು ಸಹಕಾರಿ ಕ್ಷೇತ್ರದ ವಿಶೇಷತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ಪಟ್ಟಣದ ಬಸವಮಂಟಪದಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಹುನಗುಂದ-ಇಳಕಲ್ಲ ತಾಲೂಕಿನ ವಿವಿಧ ಸಹಕಾರ ಸಂಘಗಳು ಮತ್ತು ಬ್ಯಾಂಕ್ಗಳ ಸಂಯುಕ್ತ ಶುಕ್ರವಾರ ಆಶ್ರಯದಲ್ಲಿ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರಿ ಕ್ಷೇತ್ರಕ್ಕೆ ಶತಮಾನದ ಇತಿಹಾಸವಿದ್ದು, ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಅಭಿವದ್ಧಿಯಲ್ಲಿ ಮಹತ್ವದ ಕೊಡುಗೆ ನೀಡಿದೆ. ನಮ್ಮ ಅವಧಿಯಲ್ಲಿ ಹುನಗುಂದ-ಇಳಕಲ್ಲ ತಾಲೂಕಿನಲ್ಲಿ 11 ಪ್ರಾಥಮಿಕ ಕಷಿ ಪತ್ತಿನ ಸಹಕಾರ ಸಂಘಗಳನ್ನು (ಪಿಕೆಪಿಎಸ್) ಆರಂಭಿಸಲಾಗಿದ್ದು, ಶೀಘ್ರದಲ್ಲೇ ಇನ್ನೂ ಎರಡು ಸಂಘಗಳನ್ನು ಸ್ಥಾಪಿಸಲಾಗುವುದು. ಸಹಕಾರ ಕ್ಷೇತ್ರದ ಮೂಲಕವೇ ತಮ್ಮ ತಂದೆಯವರು ರೈತ ನಾಯಕನಾಗಿ, ಸಂಘದ ಅಧ್ಯಕ್ಷರಾಗಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದ್ದು, ತಾವು ಕೂಡ ಹಾವರಗಿ ಪಿಕೆಪಿಎಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು.
ರೈತರಿಗೆ ಶೇ.3ರ ಬಡ್ಡಿದರದಲ್ಲಿ ಕಷಿ ಸಾಲ ನೀಡುವ ವ್ಯವಸ್ಥೆಯ ಜೊತೆಗೆ, 10 ಲಕ್ಷ ರೂ.ವರೆಗೆ ಬಡ್ಡಿರಹಿತ ಕಷಿಯೇತರ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಯಶಸ್ವಿನಿ ಆರೋಗ್ಯ ಯೋಜನೆ, ಹಾಲು ಉತ್ಪಾದಕರಿಗೆ ಸಹಾಯಧನ ಹಾಗೂ ಮಹಿಳೆಯರಿಗೆ ಸಹಕಾರಿ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಆರ್ಥಿಕ ನೆರವು ನೀಡಲಾಗುತ್ತಿದೆ. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ 38 ಲಕ್ಷ ರೈತರಿಗೆ 30 ಸಾವಿರ ಕೋಟಿ ರೂ. ಸಾಲ ಒದಗಿಸಲು ಸಹಕಾರಿ ಕ್ಷೇತ್ರಕ್ಕೆ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.
ದಿವ್ಯ ಸಾನ್ನಿಧ್ಯ ವಹಿಸಿದ್ದ ಗಚ್ಚಿನಮಠದ ಅಮರೇಶ್ವರ ದೇವರು ಮಾತನಾಡಿ, ಸಹಕಾರಿ ಸಂಘಗಳ ಸದಸ್ಯರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಗಳು ಅಭಿವದ್ಧಿ ಹೊಂದಲು ಸಾಧ್ಯ ಎಂದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ದ್ಯಾಮಣ್ಣ ಆರ್. ಗಾಳಿ, ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಸಹಕಾರ ಮಹಾಮಂಡಳದ ನಿರ್ದೇಶಕ ಕಾಶಿನಾಥ ಹುಡೇದ ಹಾಗೂ ಮಹಾಂತೇಶ ಅವಾರಿ ಮಾತನಾಡಿದರು.
ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ನಿರ್ದೇಶಕ ಆರ್.ಪಿ. ಕಲಬುರ್ಗಿ, ಶಿವಕುಮಾರ ಬಾದವಾಡಗಿ, ಸಂಗಣ್ಣ ಹಂಡಿ, ಸುರೇಶ ಹಾದಿಮನಿ, ನೀಲಪ್ಪ ತಪೇಲಿ, ಸಾಂತಪ್ಪ ಸಾಂತಗೇರಿ, ವೀರಯ್ಯ ಭದ್ರಗೌಡ, ಜೈನಸಾಬ ಹಗೇದಾಳ, ಶೇಖರಪ್ಪ ಬಾದವಾಡಗಿ, ಉಪನಿಬಂಧಕ ದಾನಯ್ಯ ಹಿರೇಮಠ, ಸಹಾಯಕ ನಿಬಂಧಕಿ ಎ.ಎಸ್. ರೇಣುಕಾ, ಸಹಕಾರಿ ಅಭಿವದ್ಧಿ ಅಧಿಕಾರಿ ಶ್ರೀಶೈಲ ಬಾಡಗಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಬಿ.ಎಸ್. ಪಾಟೀಲ, ಬಸವೇಶ್ವರ ಬ್ಯಾಂಕ್ ವ್ಯವಸ್ಥಾಪಕ ಎಸ್.ಬಿ. ಚಳಗೇರಿ ಸೇರಿ ವಿವಿಧ ಸಹಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.