ಜಿಲ್ಲೆ

Bagalkote: ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಹೃದಯಾಘಾತದಿಂದ ಸಾವು

ಬಾಗಲಕೋಟೆ: ( Bagalkote)  ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ  ಯೋಧ ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ.

ಮಾಗುಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ, ಬಾಗಲಕೋಟೆ ಜಿಲ್ಲೆಯ ನಿವಾಸಿಯಾಗಿದ್ದ ಈ ಯೋಧ ರಾಜಸ್ಥಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಮಾಗುಂಡಯ್ಯ ಚನ್ನಯ್ಯ ರೇಷ್ಮೆ  ಅವರು ಕಳೆದ 14 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.  ಬೆಳಗಾವಿ ಮರಾಠಾ ಇನ್ ಫೆಂಟ್ರಿ ಯುನಿಟ್ 19, ಮೆಕ್ಯಾನಿಕ್ ಸಿ/ಒ 56 ಎಪಿಒ ಬಿಕಾನರ್ ಕಾಂಟ್ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪತ್ನಿ ಹಾಗೂ ಮಕ್ಕಳೊಂದಿಗೆ ಯೋಧ ರಾಜಸ್ಥಾನದಲ್ಲಿ ನೆಲೆಸಿದ್ದರು. ನಿನ್ನೆ ಮಧ್ಯಾಹ್ನ ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ವೇಳೆ ಹೃದಯಾಘಾತದಿಂದ ಮೃತರಾದರು.

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುವ ಯೋಧನ ಅಂತ್ಯಕ್ರಿಯೆ ಜನೇವರಿ 15ರಂದು ನಂದಿಕೇಶ್ವರ ಗ್ರಾಮದಲ್ಲಿ ನಡೆಯಲಿದೆ.