ಬೆಳ್ತಂಗಡಿ: ಬಳಂಜ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆ ಆರಂಭೋತ್ಸವ ಶುಕ್ರವಾರ ನಡೆಯಿತು.
ವಿದ್ಯಾರ್ಥಿಗಳಿಗೆ ಹೂವು ನೀಡಿ, ತಿಲಕ ಹಚ್ಚಿ, ಆರತಿ ಬೆಳಗಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು. ಅಮೃತ ಮಹೋತ್ಸವ ಹೊಸ್ತಿಲಲ್ಲಿರುವ ಬಳಂಜ ಶಾಲೆ ವಿವಿಧ ಚಟುವಟಿಕೆಗಳ ಬಗ್ಗೆ ಸಮಾಲೋಚಿಸಲಾಯಿತು.
ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಎಸ್‌ಡಿಎಂಸಿ ಅಧ್ಯಕ್ಷ ರತ್ನಾಕರ ಪೂಜಾರಿ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ., ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್, ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಅಧ್ಯಕ್ಷ ಸುಕೇಶ್ ಪೂಜಾರಿ, ಜ್ಯೋತಿ ಮಹಿಳಾ ಮಂಡಲ ಅಧ್ಯಕ್ಷೆ ಚೇತನಾ ಜೈನ್, ಪ್ರೌಢಶಾಲಾ ಎಚ್.ಎಂ. ಸುಲೋಚನಾ, ಪ್ರಮುಖರಾದ ಪ್ರಮೋದ್ ಜೈನ್, ವಿನು ಬಳಂಜ, ರತ್ನರಾಜ್ ಜೈನ್, ಪ್ರವೀಣ್ ಕುಮಾರ್ ಎಚ್.ಎಸ್., ರಾಕೇಶ್ ಹೆಗ್ಡೆ, ವಿಶ್ವನಾಥ ಹೊಳ್ಳ, ಸತೀಶ್ ಕೆ., ಗಣೇಶ್ ಸಂಭ್ರಮ, ಸತೀಶ್ ರೈ ಬಾರ್ದಡ್ಕ ಹಾಗೂ ಎಸ್‌ಡಿಎಂಸಿ ಸದಸ್ಯರು, ಶಿಕ್ಷಣ ಟ್ರಸ್ಟ್ ಮತ್ತು ಅಮೃತ ಮಹೋತ್ಸವ ಸಮಿತಿ ಸದಸ್ಯರು ಹಾಗೂ ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಸುಲೋಚನಾ ಸ್ವಾಗತಿಸಿ, ಸಹ ಶಿಕ್ಷಕಿ ವೀಣಾ ನಿರೂಪಿಸಿದರು.