ಬಳ್ಳಾರಿ : ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಇಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬಳಿಕ 2 ಗಂಟೆಗೆ ಜಿಲ್ಲೆಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಾಗಿ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಮತ್ತು ಹಿರಿಯ ಸಾಹಿತಿಗಳು, ಇತರೆ ಕನ್ನಡ ಪರ ಸಂಘ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಸಂಡೂರಿನ ಆದರ್ಶ ಕಲ್ಯಾಣ ಮಂಟಪದಲ್ಲಿ ಜರುಗಲಿರುವ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆಯ ಸ್ಥಳ ವೀಕ್ಷಿಸಿ ಹೊಸಪೇಟೆಗೆ ತೆರಳಲಿದ್ದಾರೆ ಎಂದು ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===