ಜಿಲ್ಲೆ

ಕೆಎಂಎಫ್ ಅಧ್ಯಕ್ಷ ಸ್ಥಾನದ ಅಕಾಂಕ್ಷಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದ ಅಕಾಂಕ್ಷಿ ಎಂದು ರಾಬಕೊವಿ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಭೀಮಾ ನಾಯ್ಕ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸದ್ಯ ರಾಬಕೊವಿ ಚುನಾವಣೆಯಲ್ಲಿ ಕೊಪ್ಪಳಕ್ಕೆ ಅಧ್ಯಕ್ಷ, ರಾಯಚೂರಿಗೆ ಉಪಾಧ್ಯಕ್ಷ ಹಾಗೂ ವಿಜಯನಗರಕ್ಕೆ ಕೆಎಂಎಫ್ ಆಯ್ಕೆಯಾಗಲು ಡೆಲಿಗೇಷನ್ ಸ್ಥಾನ ನೀಡಲು ಪಕ್ಷದ ವರಿಷ್ಠರು ಒಪ್ಪಿದ್ದಾರೆ. ಆದ್ದರಿಂದ, ವಿಜಯನಗರ ಜಿಲ್ಲೆಯ ಎಲ್ಲ ಸದಸ್ಯರ ಬೆಂಬಲದೊಂದಿಗೆ ಕೆಎಂಎಫ್‌ಗೆ ಆಯ್ಕೆಯಾಗಿವೆ ಎಂದು ಭವಿಷ್ಯ ನುಡಿದರು.

ಮಾಜಿ ಸಂಸದ ಡಿ.ಕೆ.ಸುರೇಶ್ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದರ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ವರಿಷ್ಠರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಸೂಚನೆಯಂತೆ ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರಿಂದ ನನಗೆ ಯಾವುದೇ ಅಸಮಾಧಾನವಿಲ್ಲ, ಪಕ್ಷದ ಹೈಕಮಾಂಡ್ ತಿರ್ಮಾನಕ್ಕೆ ಬದ್ಧನಾಗಿರುವೆ ಎಂದರು.