ಜಿಲ್ಲೆ

ನಾಗೇಂದ್ರ ಅಧ್ಯಕ್ಷತೆಯಲ್ಲಿ ಕಸಾಪ ಆಯೋಜನೆ

ಬಳ್ಳಾರಿ : ಜಿಲ್ಲೆಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಅಷ್ಟರೊಳಗೆ ಅವರು ಮಂತ್ರಿಯಾಗುತ್ತಾರೆ ಎಂದು ಶಾಸಕ ನಾರಾ ಭರತರೆಡ್ಡಿ ಭವಿಷ್ಯ ನುಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೋಮ್ಮೆ ನಾಗೇಂದ್ರ ಸಚಿವ ಸ್ಥಾನ ಪಡೆಯುವುದು ನೂರಕ್ಕೆ ನೂರರಷ್ಟು ಸತ್ಯ ಎಂದರು. ಈ ಮಾತು ಸಿಎಂ, ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೂಡ ತಿಳಿಸಿದ್ದಾರೆ ಎಂಬುದಾಗಿ ಹೇಳಿದರು. ಕೆಲ ದಿನಗಳ ಹಿಂದಯೇ ನಾಗೇಂದ್ರ ಸಚಿವ ಸ್ಥಾನ ದೊರೆಯುವ ವಿಶ್ವಾಸವಿತ್ತು. ಕೆಲ ಕಾರಣಗಳಿಂದ ಮುಂದೂಡಲಾಗಿದೆ ಎಂದರು.