ಟಿ.ಎಚ್.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಪ್ರಾಚಾರ್ಯೆ ಡಾ.ಪ್ರಜ್ಞಾ ಕೆ.ವಿ. ಉದ್ಘಾಟಿಸಿದರು. ಸಾವಿತ್ರಿ ಬಾಯಿಪುಲೆ ಶಿಕ್ಷಕಿಯರ ಸಂಘದ ರಾಜ್ಯ ಕೋಶಾಧ್ಯಕ್ಷೆ ದೊಡ್ಡ ಬಸಮ್ಮ, ಉಪನ್ಯಾಸಕರಾದ ಡಾ.ಶಾಲಿನಿ ವಿ., ಡಾ.ಅಪರ್ಣಾ ಎಸ್.ಆರ್., ಡಾ.ಚಂದ್ರಮ್ಮ ಎಸ್., ಮಮತಾ ಕೆ., ರೇಣುಕಾ ಭಾಗವಹಿಸಿದ್ದರು. 
ಬಳ್ಳಾರಿ

ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ

ಪ್ರಮುಖ ಮುಖ್ಯಾಂಶಗಳು

  • ಬೆಳವಣಿಗೆಗೆ
  • ದಾರಿದೀಪವಾಗಲಿದೆ
  • ಕಾಲೇಜು
ಸಿರಗುಪ್ಪ: ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಆಧುನಿಕಯುಗದಲ್ಲಿ ಸ್ತ್ರೀ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ ಎಂದು ಬಳ್ಳಾರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಚಾರ್ಯೆ ಡಾ.ಪ್ರಜ್ಞಾ ಕೆ.ವಿ. ಹೇಳಿದರು.
ಪಟ್ಟಣದ ಟಿ.ಎಚ್.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲಿಯೂ ಅವಕಾಶ ಕೊಡುವುದು ಮುಂದಿನ ಬೆಳವಣಿಗೆಗೆ ದಾರಿದೀಪವಾಗಲಿದೆ. ತಾಂತ್ರಿಕ, ಸಂಶೋಧನೆ ಹಾಗೂ ಉತ್ಪಾದನಾ ಕ್ಷೇತ್ರಗಳಲ್ಲಿ ಮಹಿಳೆಯರು ದೇಶಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ತಮ್ಮ ಬುದ್ಧಿಶಕ್ತಿಯಿಂದ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರ ನೀಡಿದ್ದಾರೆ ಎಂದರು.
ಸಾವಿತ್ರಿ ಬಾಯಿಪುಲೆ ಶಿಕ್ಷಕಿಯರ ಸಂಘದ ರಾಜ್ಯ ಕೋಶಾಧ್ಯಕ್ಷೆ ದೊಡ್ಡ ಬಸಮ್ಮ ಮಾತನಾಡಿ, ಇತಿಹಾಸ ಮತ್ತು ಸಮಕಾಲೀನ ಸಮಾಜದಲ್ಲಿನ ಘಟನೆಗಳಿಗೆ ಮಹಿಳೆಯರ ಕೊಡುಗೆಗಳನ್ನು ಎತ್ತಿ ತೋರಿಸುವ ದಿನವೇ ಮಾ.8ರ ಅಂತಾರಾಷ್ಟ್ರೀಯ ಮಹಿಳಾ ದಿನವಾಗಿದೆ. ಹೆಣ್ಣು ಸಮಾಜದ ಕಣ್ಣು, ಬದುಕಿನ ಎಲ್ಲ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿಗಿತ್ತಿಯಾಗಿದ್ದಾಳೆ ಎಂದರು.
ಕಾಲೇಜು ಪ್ರಭಾರ ಪ್ರಾಚಾರ್ಯ ಕೃಷ್ಣಪ್ಪ ಹಚ್ಚೊಳ್ಳಿ ಪ್ರಾದೇಶಿಕ ಅರಣ್ಯ ಉಪ ವಲಯ ಅರಣ್ಯಾಧಿಕಾರಿ ವೈ.ಜ್ಯೋತಿ ಮಾತನಾಡಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಹಾಯಕ ಪ್ರಾಧ್ಯಾಪಕ ಡಾ.ಕೆ.ಎಂ.ಚಂದ್ರಕಾಂತ, ಉಪನ್ಯಾಸಕರಾದ ಡಾ.ಶಾಲಿನಿ ವಿ., ಡಾ.ಅಪರ್ಣಾ ಎಸ್.ಆರ್., ಡಾ.ಚಂದ್ರಮ್ಮ ಎಸ್, ಮಮತಾ ಕೆ, ರೇಣುಕಾ ಭಾಗವಹಿಸಿದ್ದರು.