ಸಿರಿಗೇರಿ ಜನತಾ ಕಾಲನಿ ಸ.ಹಿ.ಪ್ರಾ. ಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.  
ಬಳ್ಳಾರಿ

ಸಮಾಜದ ಏಳಿಗೆಗೆ ಶ್ರಮಿಸಿದ ಮಹನೀಯ

ಸಿರಿಗೇರಿ: ಗ್ರಾಮದ ಜನತಾ ಕಾಲನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಶನಿವಾರ ಆಚರಿಸಲಾಯಿತು.
ಮುಖ್ಯಶಿಕ್ಷಕ ಬಿ.ಆರ್.ಶಿವಕುಮಾರ್ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಕನ್ನಡ ನಾಡಿನ ಶ್ರೇಷ್ಠ ಆಡಳಿತಗಾರರಾಗಿದ್ದರು. ದೂರದೃಷ್ಟಿಯ ನಾಯಕರಾಗಿದ್ದು, ಸಮಾಜದ ಏಳಿಗೆಗಾಗಿ ಶ್ರಮಿಸಿದ ಮಹನೀಯರಾಗಿದ್ದಾರೆ. ಕೆಂಪೇಗೌಡರ ಆದರ್ಶ ಹಾಗೂ ಕೊಡುಗೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಜಯಂತಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಎಚ್.ರಾಮಲಿಂಗ, ಶಿಕ್ಷಕರಾದ ಎಚ್.ಈರಣ್ಣ, ಎಚ್.ಹನುಮಯ್ಯ, ವಿದ್ಯಾರ್ಥಿಗಳು ಇದ್ದರು.