ಕುರುಗೋಡಿನಲ್ಲಿ ನಾರಿ ಶಕ್ತಿ ವಂದನಾ ಜಾಥಾ ನಡೆಯಿತು. ರಾಜ್ಯ ಕಾರ್ಯಕಾರಣಿ ಸದಸ್ಯೆ ಡಾ.ಅರುಣಾ, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಕರೂರು ವಿಜಯಲಕ್ಷ್ಮೀ, ಎಸ್ಟಿ ಮೋರ್ಚಾ ಕಾರ್ಯಕಾರಣಿ ಸದಸ್ಯೆ ವಿಜಯಲಕ್ಷ್ಮೀ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಬಿಯಾ, ಭಾರತಿ ಇತರರಿದ್ದರು.
ಅಭಿವೃದ್ಧಿಗೆ ದಿಕ್ಕು ತೋರಿಸುವ ಶಕ್ತಿ ಮಹಿಳೆ
ಕುರುಗೋಡು: ಸಮಾಜದಲ್ಲಿ ಮಹಿಳೆಯರ ಗೌರವ, ಶಕ್ತಿ ಮತ್ತು ಸಾಧನೆ ಸ್ಮರಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಹಂಪಿ ರಮಣ ಹೇಳಿದರು.
ಪಟ್ಟಣದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಗುರುವಾರ ಆಯೋಜಿಸಿದ್ದ ನಾರಿ ಶಕ್ತಿ ವಂದನಾ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆಯರು ಕುಟುಂಬದ ಬೆನ್ನೆಲುಬು ಮಾತ್ರವಲ್ಲ, ಸಮಾಜದ ಅಭಿವೃದ್ಧಿಗೆ ದಿಕ್ಕು ತೋರಿಸುವ ಶಕ್ತಿಯಾಗಿದ್ದಾರೆ.
ರಾಜಕೀಯದಲ್ಲಿ ಶೇ.33 ಮಹಿಳಾ ಮೀಸಲಾತಿ ಸಿಕ್ಕಲ್ಲಿ ಮಹಿಳಾ ಸಂಸದರು ಹಾಗೂ ಶಾಸಕರು ಹೆಚ್ಚಾಗುತ್ತಾರೆ. ಇಂತಹ ಜಾಥಾಗಳು ಮಹಿಳೆಯರ ಹಕ್ಕು, ಸಮಾನತೆ ಮತ್ತು ಸಬಲೀಕರಣದ ಬಗ್ಗೆ ಜಾಗೃತಿ ಮೂಡಿಸುತ್ತವೆ. ಮಹಿಳೆಯರನ್ನು ಗೌರವಿಸಿ ಸಮಾನ ಅವಕಾಶ ಕಲ್ಪಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.
ಪುರಸಭೆ ಸದಸ್ಯೆ ಲಲಿತಾ ತಿಪ್ಪನಗೌಡ, ಮಾಜಿ ಉಪಾಧ್ಯಕ್ಷೆ ಪೂರ್ಣಿಮಾ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಲತಾ, ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಭದ್ರಗೌಡ, ಯುವ ಮೋರ್ಚಾ ಅಧ್ಯಕ್ಷ ಮೇಲಗಿರಿ ಬಸವರಾಜ, ಸಿರುಗುಪ್ಪ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಮಹಾಲಕ್ಷ್ಮೀ ಇತರರಿದ್ದರು.