ಹಗರಿಬೊಮ್ಮನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಗುರುಭವನ ಭೂಮಿಪೂಜೆ ಕಾರ್ಯಕ್ರಮವನ್ನು ಶಾಸಕ ಕೆ.ನೇಮಿರಾಜ್‌ನಾಯ್ಕ ಉದ್ಘಾಟಿಸಿದರು. ನಂದಿಪುರದ ಡಾ.ಮಹೇಶ್ವರ ಸ್ವಾಮೀಜಿ, ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ, ತಾಲೂಕು ಅಧ್ಯಕ್ಷೆ ಕೆ.ಬಿ.ದೀಪಿಕಾ ವಿಜಯಕುಮಾರ ಇತರರಿದ್ದರು.
- ಅಕ್ಷರದವ್ವ
- ಸಾವಿತ್ರಿಬಾಯಿ ಫುಲೆ
ಮಹಿಳಾ ಸಾಧಕರಿಗೆ ಅಕ್ಷರದವ್ವನ ಮಾದರಿ
ಹಗರಿಬೊಮ್ಮನಹಳ್ಳಿ: ಸರ್ಕಾರಿ ನೌಕರಿ ವರವಾಗಿದ್ದು, ರಾಜಕೀಯ ಮಾಡದೇ ವೃತ್ತಿಗೆ ತಕ್ಕ ಕೆಲಸಮಾಡಿ ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಹೇಳಿದರು.
ಪಟ್ಟಣದ ರಾಮನಗರ ಗುರುಭವನದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ತಾಲೂಕು ಸಂಘಟನೆಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಗುರುಭವನ ನವೀಕರಣಕ್ಕೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದ್ವೇಷದ ರಾಜಕೀಯ ಮಾಡಲು ಹೊರಟು ಪೇಚೆಗೆ ಸಿಲುಕಿಕೊಳ್ಳಬೇಡಿ. ಸಾಧನೆಗೆ ಸಮಾಜದಲ್ಲಿ ಮನ್ನಣೆ ಸಿಗಲಿದೆ. ಸಾವಿತ್ರಿಬಾಯಿ ಫುಲೆ ಶಿಕ್ಷಕರಿಗೆ ಮಾದರಿಯಾಗಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದೆ ಸಾರ್ವಜನಿಕರ ಜೀವನ ನಿರ್ವಹಣೆ ಕಷ್ಟವಾಗಿತ್ತು. ಆ ಸಮಯದಲ್ಲಿ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈಗ ಹೆಣ್ಣು ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ ದೇಶದಲ್ಲಿ ಶೇ.33 ಮೀಸಲಾತಿ, ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರು ಶ್ರದ್ಧೆ, ಶ್ರಮದಿಂದ ಕರ್ತವ್ಯ ನಿರ್ವಹಿಸುತ್ತಾರೆ. ಗುರುಭವನಕ್ಕೆ 50ಲಕ್ಷ ರೂ.ಗಳಷ್ಟೇ ಅಲ್ಲದೆ ಕೆಲಸ ಆರಂಭವಾದರೆ ಇನ್ನಷ್ಟು ಅನುದಾನ ನೀಡುವುದಾಗಿ ಭರವಸೆ ನೀಡಿದರು.
ನಂದಿಪುರದ ಡಾ.ಮಹೇಶ್ವರ ಸ್ವಾಮೀಜಿ, ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ, ತಾಲೂಕು ಅಧ್ಯಕ್ಷೆ ಕೆ.ಬಿ.ದೀಪಿಕಾ ವಿಜಯಕುಮಾರ, ಪುರಸಭೆ ಸದಸ್ಯ ದೀಪಕ್ ಸಾ ಕಠಾರೆ, ಸಮಾಜ ಕಲ್ಯಾಣ ಇಲಾಖೆ ಜಗದೀಶ, ಜೆಡಿಎಸ್ ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹ್ಯಾಟಿ ಲೋಕಪ್ಪ, ಕಾರ್ಯದರ್ಶಿ ಕೊಟ್ರೇಶ್, ಬಿಇಒ ಪ್ರಭಾಕರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಪಿ.ಎಂ.ಮಂಜುನಾಥ, ಬಿಸಿಯೂಟ ಅಧಿಕಾರಿ ರಾಜಕುಮಾರ್, ಗುರುಭವನ ಸಮಿತಿ ಅಧ್ಯಕ್ಷ ಪ್ರಹ್ಲಾದ್, ದೈ.ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಶೇಖರ್ ಇತರರಿದ್ದರು.