ಅಪರಿಚಿತ ಯುವಕರಿಂದ ಹಲ್ಲೆ 
ಬಳ್ಳಾರಿ

ಅಪರಿಚಿತ ಯುವಕರಿಂದ ಹಲ್ಲೆ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಮೂವರು ಯುವಕರು ಹಲ್ಲೆ
ಬಳ್ಳಾರಿ : ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಹಮಾಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಮೂವರು ಅಪರಿಚಿತ ಯುವಕರು ಹಲ್ಲೆ ಮಾಡಿರುವ ಘಟನೆ ಈದ್ಗಾ ಮೈದಾನ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ಬೀಡಿ ಕಾಲನಿ ನಿವಾಸಿ ಶಂಕರ್ ಹಲವು ವರ್ಷಗಳಿಂದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಹಮಾಲಿಯಾಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಬೆಳಗಿನ ಜಾವ ಸುಮಾರು ಮೂರು ಗಂಟೆಗೆ ಕಾಲ್ನಡಿಗೆಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ, ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಬಂದ ಮೂವರು ಯುವಕರು ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಕುರಿತು ಕೌಲಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
===