ಕಂಪ್ಲಿಯಲ್ಲಿ ರಾಷ್ಟ್ರೀಯ ಪಂಚಾಯತ್‌ರಾಜ್ ದಿನದ ಕಾರ್ಯಕ್ರಮದಲ್ಲಿ ಕರವಸೂಲಿಗಾರರನ್ನು ಗೌರವಿಸಲಾಯಿತು. ಶಾಸಕ ಜೆ.ಎನ್.ಗಣೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಅಧಿಕಾರಿಗಳಾದ ಆರ್.ಕೆ.ಶ್ರೀಕುಮಾರ್, ಕೆ.ಎಸ್.ಮಲ್ಲನಗೌಡ ಇತರರಿದ್ದರು. 
ಬಳ್ಳಾರಿ

ಜನರೊಂದಿಗೆ ಸೌಜನ್ಯದಿಂದ ವರ್ತಿಸಿ

ಶಾಮಸುಂದರ್ ಕೊಪ್ಪಳಕರ್

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಶಾಸಕ ಜೆ.ಎನ್.ಗಣೇಶ್ ಸೂಚನೆ
  • ಪಂಚಾಯತ್‌ರಾಜ್ ದಿನಾಚರಣೆ
ಕಂಪ್ಲಿ: ಎಷ್ಟೇ ಒತ್ತಡಗಳಿದ್ದರೂ ಸರ್ಕಾರಿ ಅಧಿಕಾರಿ ಗಳು ಸಮಾಧಾನದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಪಟ್ಟಣದ ತಾಪಂ.ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್‌ರಾಜ್ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಚೇರಿಗೆ ಬಂದವರೊಡನೆ ಸೌಜನ್ಯದೊಂದಿಗೆ ವರ್ತಿಸಿ, ಸೂಕ್ತ ಮಾರ್ಗದರ್ಶನ ನೀಡಿ ಆದರ್ಶ ಅಧಿಕಾರಿಗಳಾಗಬೇಕು. ಸರ್ಕಾರಿ ಜಮೀನು ಗುರುತಿಸಿ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲು ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.
ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಮಾರ್ಗಸೂಚಿಯಂತೆ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.
ಪಂಚಾಯತ್ ರಾಜ್ ಇಲಾಖೆ ಕರ ವಸೂಲಿಗಾರರು, ಸ್ವಚ್ಛತೆ ಕೆಲಸಗಾರರು, ಪಿಡಿಒ, ಇತರ ಅಧಿಕಾರಿ, ಸಿಬ್ಬಂದಿಯನ್ನು ಗೌರವಿಸ ಲಾಯಿತು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್, ತಾಪಂ ಇಒ ಆರ್.ಕೆ.ಶ್ರೀಕುಮಾರ್, ಎಡಿ ಕೆ.ಎಸ್.ಮಲ್ಲನಗೌಡ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ದೊಡ್ಡಬಸಪ್ಪ, ಅಧಿಕಾರಿಗಳಾದ ಎಂ. ನಾರಾಯಣಸ್ವಾಮಿ, ಗುರುಪ್ರಸಾದ, ಎಂ.ಶೇಷಾವಲಿ ಇತರರಿದ್ದರು.