ಬಳ್ಳಾರಿ : ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಕೆಕೆಆರ್‌ಟಿ ಬಸ್‌ವೊಂದು ಹರಿದ ಪರಿಣಾಮ ಬೈಕ್ ಹಿಂಬದಿ ಸವಾರ ಮೃತಪಟ್ಟಿದ್ದಾನೆ.
ತಾಲೂಕಿನ ಬೊಮ್ಮನಹಾಳ್ ನಿವಾಸಿ ರವಿ (18) ಮೃತ. ಕೆಕೆಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಹರಿದಿದೆ. ಬೈಕ್ ಚಲಾಯಿಸುತ್ತಿದ್ದ ಆಕಾಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತಕ್ಕೆ ಬಸ್‌ನ ಬ್ರೇಕ್ ಫೇಲ್ ಆಗಿರುವುದೇ ಕಾರಣವೇ ಅಥವಾ ಚಾಲಕನ ನಿರ್ಲಕ್ಷೃವೇ ಎಂಬುದು ತನಿಖೆಯ ನಂತರವಷ್ಟೇ ಸ್ಪಷ್ಟವಾಗಬೇಕಿದೆ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.