ಬಳ್ಳಾರಿಯ ಗಡಗಿ ಚೆನ್ನಪ್ಪ ವೃತ್ತದಲ್ಲಿ ಗೋ ಹತ್ಯೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ, ಮುಖಂಡರಾದ ರಾಮಲಿಂಗಪ್ಪ, ವೈ.ಹನುಮಂತಪ್ಪ, ಶ್ರೀರಾಮುಲು, ವೆಂಕಟರಮಣರೆಡ್ಡಿ, ರಾಮಕೃಷ್ಣ ಇದ್ದರು.
- ನಿಷೇಧ ಕಾಯ್ದೆ
- ಅಧಿವೇಶನ
- ಸಚಿವ ಸಂಪುಟ
ಬಳ್ಳಾರಿ : ರಾಜ್ಯ ಸರ್ಕಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ, ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಮಾತನಾಡಿ, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಗೋವುಗಳ ಹತ್ಯೆ ತಡೆಯಲು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದೆ. ಈಗಾಗಲೇ ಸಚಿವ ಸಂಪುಟ ದಲ್ಲಿ ಕಾಯ್ದೆ ಅನುಮೋದನೆ ಪಡೆದು, ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ ಎಂದರು.
ರಾಜ್ಯದಲ್ಲಿ ಹಿಂದು ಸಮಾಜಕ್ಕೆ ಅತ್ಯಂತ ಪೂಜ್ಯನಿಯವಾದ ಗೋವುಗಳನ್ನು ಹಿಂಸಾತ್ಮಕವಾಗಿ ಕಳ್ಳ ಸಾಗಣೆ ನಡೆಸುವ ವೇಳೆ ಪೊಲೀಸರು ದಾಳಿ ನಡೆಸಿ ವಶಪಡೆದ ನಂತರ, ವಾಹನದಲ್ಲಿನ ಗೋವುಗಳನ್ನು ಸುಲಭದಲ್ಲಿ ಹಿಂತಿರುಗಿಸುವಂತೆ ಮಾಡಲು ಈ ಕಾಯ್ದೆ ಸಹಕಾರಿಯಾಗಲಿದೆ ಎಂದು ಕಿಡಿಕಾರಿದರು. ಗೋವುಗಳಿಗೆ ಹಿಂಸೆ ಹೆಚ್ಚಾಗುವ ಸಾಧ್ಯತೆಯಿದ್ದು, ಕಾಯ್ದೆ ತಿದ್ದುಪಡಿ ತಕ್ಷಣ ಹಿಂಪಡೆಯಬೇಕು. ಸದ್ಯ ಜಾರಿಯಲ್ಲಿರುವ ಕಾಯ್ದೆ ಪರಿಣಾಮಕಾರಿಯಾಗಿದ್ದು, ಬ್ಯಾಂಕ್ ಗ್ಯಾರಂಟಿ ತೆಗೆದುಕೊಳ್ಳುವ ಷರತ್ತುನಿಂದ ಬಹಳಷ್ಟು ಅಕ್ರಮ ಗೋವು ಸಾಗಣಿಕೆ ತಗ್ಗಿದ್ದು, ತಿದ್ದುಪಡಿಗೆ ಅವಕಾಶ ನೀಡಬಾರದು ಆಗ್ರಹಿಸಿದರು. ಇಲ್ಲಿನ ನಾರಾಯಣ ರಾವ್ ಪಾರ್ಕ್‌ನಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ , ಸಿಎಂ ಹಾಗೂ ಡಿಸಿಎಂ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು.