ಹೂವಿನಹಡಗಲಿ ತಾಲೂಕಿನ ಸೋವೆನಹಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಬಹಿರಂಗ ಸಭೆಯನ್ನು ಮಾಜಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಉದ್ಘಾಟಿಸಿದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ವಿಜಯಕುಮಾರ್, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ, ಅಟವಾಳಗಿ ಕೊಟ್ರೇಶ ಇತರರಿದ್ದರು. 
ಬಳ್ಳಾರಿ

ಗ್ರಾಪಂಗಳ ಖಾಸಗೀಕರಣಕ್ಕೆ ಬಿಜೆಪಿ ಯತ್ನ

ಹೂವಿನಹಡಗಲಿ: ಕಾಂಗ್ರೆಸ್ ಸರ್ಕಾರ ಬಡಜನರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶವನ್ನು ಅಭಿವೃದ್ಧಿ ಪಡಿಸುವ ಕಾರ್ಯ ಮಾಡಿದೆ ಎಂದು ಮಾಜಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಹೇಳಿದರು.
ವಿಬಿ ಜಿ ರಾಮ್‌ಜಿ ಯೋಜನೆ ವಿರೋಧಿಸಿ ಕಾಂಗ್ರೆಸ್ ತಾಲೂಕು ಸಮಿತಿಯಿಂದ ಮುದ್ಲಾಪುರ ತಾಂಡಾದಿಂದ ಸೋವೆನಹಳ್ಳಿ ಗ್ರಾಮದವರೆಗೆ ಪಾದಯಾತ್ರೆ ನಡೆಸಿ ಸೋವೆನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಬಡವರು, ಕೂಲಿ ಕಾರ್ಮಿಕರ ಬದುಕು ಅತಂತ್ರ ಸ್ಥಿತಿಯಲ್ಲಿದ್ದು, ಅದನ್ನು ಪರಿಹರಿಸಲು ಜನಪರ ಯೋಜನೆಗಳನ್ನು ಜಾರಿಗೆ ತರುವ ಬದಲು ಬಿಜೆಪಿಯವರು ಯೋಜನೆಗಳನ್ನು ರದ್ದುಗೊಳಿಸುತ್ತಿದ್ದಾರೆ. ಗ್ರಾಪಂಗಳನ್ನು ಖಾಸಗೀಕರಣ ಮಾಡುವ ಉದ್ದೇಶದಿಂದ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿಗೆ ತರುತ್ತಿದ್ದಾರೆ ಎಂದು ದೂರಿದರು.
ಗುಜರಾತ್ ಮೂಲದ ಇಬ್ಬರು ವ್ಯಕ್ತಿಗಳು ಸರ್ಕಾರದ ಯೋಜನೆಗಳನ್ನು ಖರೀದಿಸುತ್ತಿದ್ದಾರೆ. ಅವುಗಳನ್ನು ಗುಜರಾತಿನವರೇ ಮಾರಾಟ ಮಾಡುತ್ತಿದ್ದಾರೆ ಎಂದ ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ವಂಚನೆ ಮಾಡಿದರೆ, ಸ್ಥಳೀಯ ನಾಯಕರು ಕ್ಷೇತ್ರದ ಜನತೆಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ವಿಜಯಕುಮಾರ್, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ, ಅಟವಾಳಗಿ ಕೊಟ್ರೇಶ, ಪ್ರಚಾರ ಸಮಿತಿ ಅಧ್ಯಕ್ಷ ಹಾಲೇಶ, ಪ್ರಮುಖರಾದ ಜಿ.ವಸಂತ, ಬಸವನಗೌಡ, ಅರವಳ್ಳಿ ವೀರಣ್ಣ, ದೂದ್ಯಾನಾಯ್ಕ, ಚಂದ್ರನಾಯ್ಕ, ಶಾಂತನಗೌಡ, ಗೌಸ್‌ಸಾಬ್ ಇತರರಿದ್ದರು.