ಸಿರಿಗೇರಿ ಸಮೀಪದ ಕೊಂಚಿಗೇರಿ ಆಯುಷ್ಮಾನ್ ಆರೋಗ್ಯ ಕೇಂದ್ರಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಮುದಾಯ ಆರೋಗ್ಯ ಅಧಿಕಾರಿ ನಾಗೇಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಕಾಸಿಂ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಶ್ರುತಿ, ಆಶಾ ಕಾರ್ಯಕರ್ತೆಯರು ಇದ್ದರು.
- ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಕಾಸಿಂ ಮಾಹಿತಿ
- ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ
ಸಿರಿಗೇರಿ: ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಎದೆ ಹಾಲು ಅವಶ್ಯ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಕಾಸಿಂ ಹೇಳಿದರು.
ಕೊಂಚಿಗೇರಿಯ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್‌ಸಿಎಚ್ ಅಧಿಕಾರಿಗಳ ಕಾರ್ಯಾಲಯ, ಸಿರಗುಪ್ಪ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಸಿರಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗುರುವಾರ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮತನಾಡಿದರು. ತಾಯಿಯ ಹಾಲಿನಲ್ಲಿ ರೋಗನಿರೋಧಕ ಶಕ್ತಿ ಮತ್ತು ಅಗತ್ಯ ಪೋಷಕಾಂಶಗಳಿದ್ದು, ಶಿಶುಗಳ ಆರೋಗ್ಯಕರ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸ್ತನ್ಯಪಾನ ತಾಯಿಯ ಆರೋಗ್ಯ ಕಾಪಾಡುತ್ತದೆ ಮತ್ತು ಹೆರಿಗೆ ನಂತರದ ಚೇತರಿಕೆಗೆ ಸಹಕಾರಿ. ಹಾಲುಣಿಸುವುದರಿಂದ ತಾಯಿ ಸ್ತನ ಕ್ಯಾನ್ಸರ್‌ನಿಂದ ದೂರು ಇರಬಹುದು ಎಂದರು.
ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಶ್ರುತಿ ಮಾತನಾಡಿ, ಮಗು ಹುಟ್ಟಿದ ಒಂದು ಗಂಟೆಯೊಳಗೆ ಕೊಲೆಸ್ಟ್ರಾಮ್ ರೋಗ ನಿರೋಧಕ ಹಳದಿ ಹಾಲನ್ನು ಮಕ್ಕಳಿಗೆ ಕುಡಿಸಿದರೆ ರೋಗಗಳು ಹರಡದಂತೆ ತಡೆಯುತ್ತದೆ. ತಾಯಿಯ ಎದೆ ಹಾಲು ಮಗುವಿನ ಮಾಂಸ ಖಂಡ ಮತ್ತು ಮೂಳೆಗಳ ಬೆಳವಣಿಗೆಗೆ ಮಾನಸಿಕ ಬೆಳವಣಿಗೆಗೆ ಸಹಾಯಕಾರಿ ಎಂದು ತಿಳಿಸಿದರು.