ಬಳ್ಳಾರಿಯ ಗವಿಯಪ್ಪ ವೃತ್ತದ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದಿದೆ. 
ಬಳ್ಳಾರಿ

ಕಾರು ಡಿವೈಡರ್‌ಗೆ ಡಿಕ್ಕಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಏರ್‌ಬ್ಯಾಗ್‌ನಿಂದ ಚಾಲಕ ಪಾರು
ಬಳ್ಳಾರಿ : ಇಲ್ಲಿನ ಗವಿಯಪ್ಪ ವೃತ್ತದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನ ಏರ್‌ಬ್ಯಾಗ್‌ಗಳು ತಕ್ಷಣ ತೆರೆದುಕೊಂಡಿದ್ದರಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಸ್ಥಳೀಯರು ತಕ್ಷಣ ಚಾಲಕನ ನೆರವಿಗೆ ಧಾವಿಸಿದ್ದಾರೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
===