ಬೈಕ್‌ಗೆ ಕಾರು ಡಿಕ್ಕಿ, ಸವಾರ ಮೃತ
ಬಳ್ಳಾರಿ : ನಗರದ ಹೊರವಲಯದ ಅಲ್ಲಂ ಭವನದ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ತಾಲೂಕಿನ ಗೋನಾಳ್ ಗ್ರಾಮದ ನಿವಾಸಿ ಸುರೇಶ್ (35) ಮೃತ. ಅನಂತಪುರ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕನು ಕಾರಿನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.