ಕಂಪ್ಲಿ ತಹಸಿಲ್ ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಜೂಗಲ ಮಂಜುನಾಯಕ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು. ತಾಪಂ ಇಒ ಆರ್.ಕೆ.ಶ್ರೀಕುಮಾರ್, ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಪಿಎಸ್‌ಐ ಅವಿನಾಶ ಕಾಂಬ್ಳೆ ಇತರರಿದ್ದರು. 
ಬಳ್ಳಾರಿ

ಶಿಷ್ಟಚಾರದಂತೆ ರಾಜ್ಯೋತ್ಸವ ಆಚರಿಸಿ

ಪ್ರಮುಖ ಮುಖ್ಯಾಂಶಗಳು

  • ರಾಜ್ಯೋತ್ಸವ
  • ಜಾಗ್ರತೆ

ಶಿಷ್ಟಚಾರದಂತೆ ರಾಜ್ಯೋತ್ಸವ ಆಚರಿಸಿ

ಕಂಪ್ಲಿ: ಸರ್ಕಾರಿ ಅಧಿಕಾರಿಗಳು ಸಮನ್ವಯ ಸಾಧಿಸಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಶಿಷ್ಟಾಚಾರದಂತೆ ಆಚರಿಸುವಲ್ಲಿ ಜಾಗ್ರತೆ ತೋರಬೇಕು ಎಂದು ತಹಸೀಲ್ದಾರ್ ಜೂಗಲ ಮಂಜುನಾಯಕ ಹೇಳಿದರು.
ನಗರದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಎಲ್ಲ್ಲ ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ 8 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ಷಾ.ಮಿಯಾಚಂದ್ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ, ಪಥ ಸಂಚಲನ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು ಎಂದರು.
ತಾಪಂ ಇಒ ಆರ್.ಕೆ.ಶ್ರೀಕುಮಾರ್, ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಪಿಎಸ್‌ಐ ಅವಿನಾಶ ಕಾಂಬ್ಳೆ, ಅಧಿಕಾರಿಗಳಾದ ಎಸ್.ಡಿ.ರಮೇಶ್, ಭೀಮೇಶ, ಪ್ರಕಾಶಬಾಬು, ವಿರೂಪಾಕ್ಷಗೌಡ, ಪಿ.ಬಸವರಾಜ, ಜ್ಯೋತಿ, ಲತೀಫಾ ಬೇಗಂ ಇತರರಿದ್ದರು.