ಬಳ್ಳಾರಿ : ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಶಾಸಕ ಎ.ಎಸ್.ನಡಹಳ್ಳಿ ಆರೋಪಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಯೋಜನೆಯು ವಿಕಸಿತ ಭಾರತ ಗ್ರಾಮದ ಉದ್ದೇಶವಾಗಿದೆ. ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಗೆ ಬಲ ನೀಡುವ ಮಹತ್ವದ ಹೆಜ್ಜೆಯಾಗಿದೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಡಿಜಿಟಲ್ ಸೌಲಭ್ಯಗಳ ಮೂಲಕ ಗ್ರಾಮಗಳನ್ನು ಸ್ವಾವಲಂಬಿ ಮತ್ತು ಸಶಕ್ತವಾಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯು ಲಾಭಗಳನ್ನು ಪ್ರತಿಯೊಬ್ಬ ಗ್ರಾಮಸ್ಥನಿಗೂ ತಲುಪಿಸುವ ಮೂಲಕ ಗ್ರಾಮೀಣ - ನಗರ ಅಂತರವನ್ನು ಕಡಿಮೆ ಮಾಡಿ ಸಮೃದ್ಧ ಮತ್ತು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಮಹತ್ವದ ಪಾತ್ರ ವಹಿಸಿದೆ ಎಂದರು.
ದೇಶದ ಬಡ ಜನತೆಗೆ ಅವಶ್ಯವಾದ ಉದ್ಯೋಗವನ್ನು ನೀಡುವ ಯೋಜನೆಗಳು ಈಗಾಗಲೇ ಹಲವು ಹೆಸರುಗಳಲ್ಲಿ ಬಂದಿದೆ. ಅದರಂತೆ ಯೋಜನೆಯ ಹೆಸರು ಬದಲಾವಣೆ ಮಾಡಿದೆ ಎಂಬುದಾಗಿ ಸಮರ್ಥಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಾಯಕರು ಅನೇಕ ಯೋಜನೆಗಳಿಗೆ ನಕಲಿ ಗಾಂಧಿಗಳ ಹೆಸರಿಟ್ಟರೇ ಹೊರತು. ಬೆರಣಿಕೆಯಷ್ಠೆ ಯೋಜನೆಗಳಿಗೆ ಮಹಾತ್ಮ ಗಾಂಧಿ ಹೆಸರು ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು. ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ, ಮಾಜಿ ಸಂಸದ ಸಣ್ಣ ಫಕೀರಪ್ಪ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್.ಗುರುಲಿಂಗನಗೌಡ, ಮುಖಂಡರಾದ ಕೆ.ಎಸ್.ದಿವಾಕರ್, ಎಚ್.ಹನುಮಂತಪ್ಪ, ಜಿ.ವಿರೂಪಾಕ್ಷಗೌಡ, ಜಿ.ವೆಂಕಟರಮಣ ಇದ್ದರು.