ಕುರುಗೋಡು ತಾಲೂಕು ಆಡಳಿತ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್ ನರಸಪ್ಪ, ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ, ಶಿರಸ್ತೇದಾರ್ ವಿಜಯ ಕುಮಾರ್, ಉಪತಹಸೀಲ್ದಾರ್ ರಾಜಶೇಖರ್ ಇತರರಿದ್ದರು. 
ಬಳ್ಳಾರಿ

ಪ್ರಜೆಗಳಿಗಾಗಿ ಕೆರೆ-ಕಟ್ಟೆಗಳ ನಿರ್ಮಾಣ

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ನರಸಪ್ಪ ಹೇಳಿಕೆ
  • ನಾಡಪ್ರಭು ಕೆಂಪೇಗೌಡ ಜಯಂತಿ
ಕುರುಗೋಡು: 16ನೇ ಶತಮಾನದಲ್ಲಿ ಅತ್ಯಂತ ವೈಜ್ಞಾನಿಕ ಹಾಗೂ ವ್ಯವಸ್ಥಿತ ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೇವಲ ಒಂದು ನಗರದ ನಿರ್ಮಾಣ ಅಲ್ಲದೇ ಪ್ರಜೆಗಳಿಗಾಗಿ ಕೆರೆ-ಕಟ್ಟೆಗಳನ್ನು ನಿರ್ಮಿಸಿ, ಕೃಷಿ, ವ್ಯಾಪಾರ-ವಹಿವಾಟುಗಳಿಗೆ ಉತ್ತೇಜನ ನೀಡಿದ್ದರು. ದಕ್ಷ ಆಡಳಿತ ಮತ್ತು ಜನಪರ ಕಾಳಜಿಯೇ ಜಾಗತಿಕ ಮಟ್ಟದ ಬೆಂಗಳೂರು ನಗರದ ಅಭಿವೃದ್ಧಿಗೆ ಕಾರಣವಾಗಿದೆ ಎಂದರು.