ಬಳ್ಳಾರಿಯ ಕೌಲಬಜಾರ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂೆ ದಿನಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಡಿಎಚ್‌ಒ ಡಾ.ವೈ.ರಮೇಶಬಾಬು ಉದ್ಘಾಟಿಸಿದರು. ಪಾಲಿಕೆ ಸದಸ್ಯೆ ಡಿ.ಸುಕುಂ, ವೈದ್ಯಾಧಿಕಾರಿಗಳಾದ ಡಾ.ರೇವಣಸಿದ್ದಪ್ಪ, ಪ್ರತಾಪ್, ಖುರ್ಶಿದ್ ಬೇಗಮ್ ಇತರರಿದ್ದರು. 
ಬಳ್ಳಾರಿ

ಡೆಂೆ ನಿಯಂತ್ರಣಕ್ಕೆ ಸಹಕರಿಸಿ

ಪ್ರಮುಖ ಮುಖ್ಯಾಂಶಗಳು

  • ಈಜಿಪ್ಟ್ ಸೊಳ್ಳೆಗಳ ಮರಿ ಉತ್ಪತ್ತಿ ತಡೆಯಬಹುದು
  • ಸಮುದಾಯದ ಪಾಲ್ಗೊಳ್ಳುವಿಕೆ ಪರಿಶೀಲಿಸಿ
ಬಳ್ಳಾರಿ : ಸಾರ್ವಜನಿಕರು ಮನೆಯ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡುವುದರೊಂದಿಗೆ, ಡೆಂೆ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.
ನಗರ ಕೌಲಬಜಾರ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ಡೆಂೆ ದಿನಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನೆಯ ಒಳಗಿನ ಸ್ವಚ್ಛತೆಗೆ ನೀಡುವಷ್ಟೇ ಹೊರಗಿನ ಸ್ವಚ್ಛತೆಗೂ ನೀಡಬೇಕು. ನೀರು ತುಂಬುವ ಪರಿಕರಗಳನ್ನು ವಾರಕ್ಕೊಮ್ಮೆ ತೊಳೆದು, ಒಣಗಿಸಿ ನಂತರ ನೀರು ತುಂಬಿ ಸರಿಯಾಗಿ ಮುಚ್ಚಳ ಮುಚ್ಚಬೇಕು. ಮನೆಯ ಹೊರಗೆ ಅನಗತ್ಯವಾಗಿ ಮಳೆ ನೀರು ನಿಲ್ಲುವ ಬೀಸಾಡಿದ ಟೈರ್, ತಗಡಿನ ಟಿನ್, ಪ್ಲಾಸ್ಟಿಕ್ ಕಪ್, ಹೂವಿನ ಕುಂಡ ಹಾಗೂ ಫ್ರಿಡ್ಜ್ ಹಿಂಭಾಗದಲ್ಲಿ ಏಳು ದಿನಗಳಿಗಿಂತ ಹೆಚ್ಚು ಕಾಲ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಇದರಿಂದ ಡೆಂೆ ಮತ್ತು ಚಿಕೂನ್‌ಗುನ್ಯಾ ಹರಡುವ ಈಡೀಸ್ ಈಜಿಪ್ಟ್ ಸೊಳ್ಳೆಗಳ ಮರಿ ಉತ್ಪತ್ತಿ ತಡೆಯಬಹುದು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ವಿ.ಕೆ.ಮರಿಯಂಬಿ ಮಾತನಾಡಿ, ಡೆಂೆ ನಿಯಂತ್ರಣಕ್ಕಾಗಿ ಸಮುದಾಯದ ಪಾಲ್ಗೊಳ್ಳುವಿಕೆ ಪರಿಶೀಲಿಸಿ, ಸ್ವಚ್ಛಗೊಳಿಸಿ ಹಾಗೂ ಮುಚ್ಚಿಡಿ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ ಎಂದರು.