ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಎಸ್‌ಐಆರ್ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಡಿಸಿ ಕೆ.ನಾಗೇಂದ್ರ ಪ್ರಸಾದ್ ಮಾತನಾಡಿದರು. ಎಡಿಸಿ ಮಹಮ್ಮದ್ ಎನ್.ಜುಬೇರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಮುಖಂಡರಾದ ಎಸ್.ಶರಣ ಕುಮಾರ್, ನಿರಂಜನಕುಮಾರ್ ಇತರರಿದ್ದರು. 
ಬಳ್ಳಾರಿ

ರಾಜಕೀಯ ಪಕ್ಷಗಳ ಸಹಕಾರ ಅಗತ್ಯ

ಪ್ರಮುಖ ಮುಖ್ಯಾಂಶಗಳು

  • ಗಣತಿ ನಮೂನೆಗಳ ವಿತರಣೆ
ಬಳ್ಳಾರಿ : ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಕಾರ್ಯವೂ ಸಂಪೂರ್ಣ ಪಾರದರ್ಶಕತೆಯಿಂದ ಕೂಡಿದ್ದು, ರಾಜಕೀಯ ಪಕ್ಷಗಳ ಸಹಭಾಗಿತ್ವವೂ ಅಗತ್ಯವಾಗಿದೆ ಎಂದು ಡಿಸಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಈಗಾಗಲೇ ಗಣತಿ ನಮೂನೆಗಳ ವಿತರಣೆಯ ಕಾರ್ಯವು ಪ್ರಗತಿಯಲ್ಲಿದ್ದು, ಈಗಾಗಲೇ ಶೇ. 97 ರಷ್ಟು ಪ್ರಗತಿ ಸಾಧಿಸಲಾಗಿದೆ. ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್‌ಗಳು ನಮಗೆ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಬೇಕಿದೆ ಎಂದರು.
ಗಣತಿ ನಮೂನೆಗಳನ್ನು ಭರ್ತಿ ಮಾಡುವಾಗ ಸಾರ್ವಜನಿಕರಲ್ಲಿ ಉಂಟಾಗುವ ಗೊಂದಲಗಳ ತಪ್ಪಿಸಲು ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಪಾರದರ್ಶಕ ಹಾಗೂ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.