ಸಿಂಧನೂರು ಎಕ್ಸಲೆಂಟ್ ಕಾಲೇಜಿನಲ್ಲಿ ಯುವಜನರಿಗೆ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ತರಗತಿ ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಾಯತ್ರಿ ವೈ. ಮಾತನಾಡಿದರು.
- ತರಗತಿ
- ಕಾರ್ಯಕ್ರಮ
- ಕ್ಲಸ್ಟರ್ ಮಟ್ಟದ
ಸಿಂಧನೂರು: ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ ಎಂದು ಎಕ್ಸಲೆಂಟ್ ಕಾಲೇಜು ಪ್ರಾಚಾರ್ಯ ಮಂಜುನಾಥ ಸೋಮಲಾಪುರ ಹೇಳಿದರು.
ನಗರದ ಎಕ್ಸಲೆಂಟ್ ಕಾಲೇಜಿನಲ್ಲಿ ಮಂಗಳವಾರ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ರಾಯಚೂರು ಮತ್ತು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಯುವ ಜನರಿಗೆ ಕ್ಲಸ್ಟರ್ ಮಟ್ಟದ ತರಗತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿ, ಇತಿಹಾಸ, ಸಹಕಾರ ಸಂಘದ ರಚನೆ ಬಗ್ಗೆ ಜಾಗೃತಿ ಮೂಡಬೇಕಿದೆ. ಅದು ಇಂಥ ತರಬೇತಿಯಿಂದ ಮಾತ್ರ ಸಾಧ್ಯ ಎಂದರು.
ಕಾರ್ಯದರ್ಶಿ ವೆಂಕಟರಾವ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಪ್ರಮುಖವಾಗಿದ್ದು, ಇಂಥ ತರಬೇತಿಗಳಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕು. ಸಹಕಾರ ಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಹೊಂದುವಂತೆ ತಿಳಿಸಿದರು.
ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಾಯತ್ರಿ ವೈ. ಮಾತನಾಡಿ, ಕ್ಲಸ್ಟರ್ ತರಗತಿ ಉದ್ದೇಶ , ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಸಹಕಾರ ಒಕ್ಕೂಟದಿಂದ ಆಯೋಜಿಸಿದ್ದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳು, ವಿವಿಧ ತರಬೇತಿ ಕಾರ್ಯಕ್ರಮಗಳು, ಸಹಕಾರ ಚಳುವಳಿ, ಇತಿಹಾಸ, ತತ್ವಗಳು, ವಿದ್ಯಾರ್ಥಿ ಗ್ರಾಹಕರ ಸಹಕಾರ ಸಂಘದ ರಚನೆ, ಯುವ ನಾಯಕತ್ವ ಕುರಿತು ಮಾಹಿತಿ ನೀಡಿದರು. ಕಾಲೇಜು ಉಪನ್ಯಾಸಕ ಮೆಹಬೂಬ್‌ಪಾಷಾ ಇತರರಿದ್ದರು.