ಸಿರಗುಪ್ಪ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮವನ್ನು ಶಾಸಕ ಬಿ.ಎಂ.ನಾಗರಾಜ ಉದ್ಘಾಟಿಸಿದರು. ತಹಸೀಲ್ದಾರ್ ಗೌಸಿಯಾ ಬೇಗಂ, ವಾಲ್ಮೀಕಿ ವಿದ್ಯಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಎಂ.ಸತೀಶ ಇತರರಿದ್ದರು. 
ಬಳ್ಳಾರಿ

ಸಂದೇಶ ಅನುಸರಿಸಿದರೆ ಬರಲಿದೆ ಧೈರ್ಯ

ಶಾಮಸುಂದರ್ ಕೊಪ್ಪಳಕರ್
ಸಿರಗುಪ್ಪ: ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಸಂದೇಶಗಳು ಇಂದಿಗೂ ಜನಜನಿತವಾಗಿದ್ದು, ಅವುಗಳನ್ನು ಪಾಲಿಸಿದರೆ ಯಾವುದೇ ವ್ಯಕ್ತಿ ಕೂಡಾ ಎದೆಗುಂದಲಾರ ಎಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ದಲಿತ ಹಾಗೂ ಇತರ ಸಮುದಾಯದ ಸಂಘಟನೆಗಳ ಕಾರ್ಯಕರ್ತರಿಂದ ಆಯೋಜಿಸಿದ್ದ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತೆಕ್ಕಲಕೋಟೆ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಎಚ್.ದೊಡ್ಡಬಸಪ್ಪ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಕುರಿತು ಉಪನ್ಯಾಸ ನೀಡಿದರು. ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 26 ಸಾಧಕರನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.
ಅಂಬೇಡ್ಕರ ವೃತ್ತದಿಂದ ವೇದಿಕೆ ಕಾರ್ಯಕ್ರಮ ಸ್ಥಳದವರೆಗೆ ನಡೆದ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಭಾವಚಿತ್ರ ಮೆರವಣಿಗೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪೂರ್ಣಕುಂಭ, ಕಳಸ ಹಿಡಿದು ಪಾಲ್ಗೊಂಡಿದ್ದರು. ಮುದೇನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಡೊಳ್ಳು ಕುಣಿತ ಪ್ರದರ್ಶಿಸಿದರು. ವಿದ್ಯಾರ್ಥಿಗಳು ರಾಷ್ಟ್ರೀಯ ನಾಯಕರ ಛದ್ಮವೇಷ ಧರಿಸಿ ಗಮನ ಸೆಳೆದರು.
ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ, ತಹಸೀಲ್ದಾರ್ ಗೌಸಿಯಾಬೇಗಂ ಮತ್ತಿತರರು ಪುಷ್ಪನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ, ಪೌರಾಯುಕ್ತ ಗಂಗಾಧರ, ವಾಲ್ಮೀಕಿ ವಿದ್ಯಾ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಎಂ.ಸತೀಶ, ಡಿವೈಎಸ್ಪಿ ಮಾಲತೇಶ ಕೂನಬೇವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪ್ರದೀಪ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಗುರಪ್ಪ, ಪರಿಶಿಷ್ಟ ಪಂಗಡ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಮಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಟಿ.ಹುಚ್ಚೀರಪ್ಪ, ಕಾರ್ಯದರ್ಶಿ ಡಾ.ಕೆ.ಎಂ.ಚಂದ್ರಕಾಂತ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಬಿ.ಗಂಗಪ್ಪ, ಸರ್ವಧರ್ಮೀಯ ಡಾ.ಬಿ.ಆರ್. ಅಂಬೇಡ್ಕರ ಸಂಘದ ತಾಲೂಕು ಅಧ್ಯಕ್ಷ ಕೊಡ್ಲೆ ಮಲ್ಲಿಕಾರ್ಜುನ, ಬಾಬು ಜಗಜೀವನರಾಮ್ ಸಂಘದ ತಾಲೂಕು ಅಧ್ಯಕ್ಷ ಎಂ.ದೊಡ್ಡವೀರೇಶ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಚಿಕ್ಕಬಳ್ಳಾರಿ ನಾಗಪ್ಪ ಭಾಗವಹಿಸಿದ್ದರು.