ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ  
ಬಳ್ಳಾರಿ

ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಎಂಟು ಆರೋಪಿಗಳ ಬಂಧನ
  • ನಾಲ್ವರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲಾಗಿದೆ
ಬಳ್ಳಾರಿ : ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗಳ ಮೇಲೆ ಪೊಲೀಸರು ಬುಧವಾರ ದಿಢೀರ್ ದಾಳಿ ನಡೆಸಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಿ, ನಾಲ್ವರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಎಸ್ಪಿ ಸುಮನ್ ಡಿ.ಪನ್ನೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ನಿವಾಸಿಗಳಾದ ಸೂರಿ, ದೇವಿ ಪ್ರಸನ್ನ, ಎಸ್. ಶಹಜಾದಿ, ಗಣೇಶ, ಉಷಾ, ಶಾಂತಿ, ಪೈರೋಜ್ ಮತ್ತು ಅಬ್ದುಲ್ ಖದೀರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ದೇವಿ ಪ್ರಸನ್ನ ಎಂಬುವವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.
ಕಾರ್ಯಾಚರಣೆಯ ಸಂದರ್ಭದಲ್ಲಿ ದಂಧೆಯ ಜಾಲಕ್ಕೆ ಸಿಲುಕಿದ್ದ ನಾಲ್ವರು ಸಂತ್ರಸ್ತ ಮಹಿಳೆಯರನ್ನು ಪೊಲೀಸರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಮಹಿಳೆಯರನ್ನು ಮುಂದಿನ ಪುನರ್ವಸತಿ ಮತ್ತು ಆರೈಕೆಗಾಗಿ ನಗರದ ಸ್ತ್ರೀ ಸೇವಾನಿಕೇತನ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇಲ್ಲಿ ನ ಗಾಂಧಿನಗರ, ಕೌಲಬಜಾರ್ ಮತ್ತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
==