ಸಂಡೂರು ತಾಲೂಕಿನ ಜೋಗ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದಾಗಿ ಬಾಳೆ ಗಿಡ ಬಿದ್ದಿರುವುದು.
ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆಗಳು
ಸಂಡೂರು: ತಾಳೂರು ಗ್ರಾಪಂ ವ್ಯಾಪ್ತಿಯ ಜೋಗ ಗ್ರಾಮದಲ್ಲಿ ಮಂಗಳವಾರ ಗಾಳಿ, ಆಲಿಕಲ್ಲು ಸಹಿತ ಮಳೆಯಾಗಿದ್ದು, ಮೆಕ್ಕೆಜೋಳ, ಬಾಳೆ ಹಾಗೂ ತೋಟಗಾರಿಕೆ ಬೆಳೆಗಳು ಗಾಳಿಗೆ ನೆಲಕಚ್ಚಿವೆ.
ಐದು ಎಕರೆ ಪ್ರದೇಶದಲ್ಲಿ ಬಾಳೆ, ಆರು ಎಕರೆಯಲ್ಲಿ ಬೆಳೆದಿದ್ದ ಮುಸುಕಿನ ಜೋಳ ಬೆಳೆ ನಾಶವಾಗಿದೆ. ರೈತರ ದೂರಿನ ಅನ್ವಯ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕ್ಕೆ ಅಧಿಕಾರಿಗಳಿಗೆ ವರದಿ ನೀಡುವುದಾಗಿ ತಿಳಿಸಿದರು.