ಬಳ್ಳಾರಿಯ ಎಸ್‌ಬಿಐ ಕಚೇರಿ ಆವರಣದಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ನೇತೃತ್ವದಲ್ಲಿ ಬ್ಯಾಂಕ್ ನೌಕರರು ಪ್ರತಿಭಟಿಸಿದರು. ಸಂಘಟನೆಯ ಮುಖಂಡರಾದ ಆರ್.ಘನಮಲ್ಲಿ, ಆರ್.ಎಚ್.ಸೂರಜ್, ಆಶೋಕ್, ಡಿ.ರಾಮಕೃಷ್ಣ, ರವಿ, ಶಿವರಾಜ್, ಪ್ರತಾಪ್, ಎಸ್.ಮಂಜುಳಾ, ಪ್ರವೀಣ್ ಕುಮಾರ್ ಇತರರಿದ್ದರು.
ಬಳ್ಳಾರಿ ; ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ಅವಧಿ ಜಾರಿಗೊಳಿಸಲು ಒತ್ತಾಯಿಸಿ, ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ್ ಕಚೇರಿ (ಎಸ್‌ಬಿಐ) ಆವರಣದಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ನೇತೃತ್ವದಲ್ಲಿ ಬ್ಯಾಂಕ್ ನೌಕರರು ಮಂಗಳವಾರ ಪ್ರತಿಭಟಿಸಿದರು.
ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಬ್ಯಾಂಕ್ ನೌಕರರು ನಿರಂತರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗಾಗಿ ಆಗ್ರಹಿಸುತ್ತಿದ್ದರೂ, ಕೇಂದ್ರ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ. ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ. ಬ್ಯಾಂಕ್ ನೌಕರರಿಗೆ ವಾರದಲ್ಲಿ ಐದು ದಿನಗಳ ಕೆಲಸದ ಅವಧಿಯನ್ನು ಕೂಡಲೇ ಜಾರಿಗೆ ತರಬೇಕು. ನೌಕರರ ಮೇಲಿನ ಅತಿಯಾದ ಕೆಲಸದ ಒತ್ತಡವನ್ನು ಕಡಿಮೆ ಮಾಡಬೇಕು. ನ್ಯಾಯಯುತವಾದ ವೇತನ ಪರಿಷ್ಕರಣೆ ಮತ್ತು ಇತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸಂಘಟನಕಾರರು ಒತ್ತಾಯಿಸಿದರು.