ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿರುವ ಸಂಸದ ಕಚೇರಿ ಮುಂಭಾಗದಲ್ಲಿ ಸಿಪಿಎಂ ಪಕ್ಷದಿಂದ ಸೋಮವಾರ ಪ್ರತಿಭಟನೆ ನಡೆಯಿತು. ಸಂಘಟನೆ ಪದಾಧಿಕಾರಿಗಳಾದ ಜೆ. ಸತ್ಯಬಾಬು, ಎಚ್. ತಿಪ್ಪಯ್ಯ, ಜೆ. ಚಂದ್ರಕುಮಾರಿ, ವಿ.ಎಸ್. ಶಿವಶಂಕರ್, ಜೆ. ಚೆನ್ನಬಸಯ್ಯ ಇತರರಿದ್ದರು. 
ಬಳ್ಳಾರಿ

ಮೀಸಲಾತಿ ಹೆಚ್ಚಳ ಜಾರಿಗೆ ಆಗ್ರಹ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಪ್ರತಿಭಟನೆ
ಬಳ್ಳಾರಿ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಒತ್ತಾಯಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿರುವ ಸಂಸದ ಕಚೇರಿ ಮುಂಭಾಗದಲ್ಲಿ ಸಿಪಿಎಂ ಪಕ್ಷದಿಂದ ಪ್ರತಿಭಟನೆ ನಡೆಯಿತು.
ನ್ಯಾ.ಎಚ್.ಎನ್. ನಾಗಮೋಹನ ದಾಸ್ ಆಯೋಗವು ನೀಡಿದ ವರದಿಯ ಪ್ರಕಾರ ಮೀಸಲಾತಿಯನ್ನು ಶೇ. 15ರಿಂದ ಶೇ.17ಕ್ಕೆ ಹಾಗೂ ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಲಾಗಿದೆ. ಈ ವರದಿಯನ್ನು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಕರ್ನಾಟಕ ವಿಧಾನಸಭೆಯ ಈ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿ, ಸಂವಿಧಾನದ 9ನೇ ಅನುಬಂಧಕ್ಕೆ ಸೇರಿಸುವಂತೆ ಒತ್ತಾಯಿಸಲಾಯಿತು. ಇದೇ ವೇಳೆ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ವಿಷಯದಲ್ಲೂ ತುರ್ತು ಕ್ರಮ ಕೈಗೊಳ್ಳಬೇಕೆಂದು ಸಿಪಿಐ ಸಂಘಟನಕಾರರು ಮನವಿ ಮಾಡಿದರು.
====