ದೇವಸಮುದ್ರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ನಾಗರಾಜ ದಬಾಡಿ ಉದ್ಘಾಟಿಸಿದರು. ಮುಖ್ಯಶಿಕ್ಷಕ ಕೆ.ಯೋಗರಾಜ್, ಸಿಆರ್‌ಪಿ ಎಂ.ಕರುಣಾಕರಾಚಾರ್, ಎಸ್ಡಿಎಂಸಿ ಅಧ್ಯಕ್ಷ ಸಣ್ಣ ನಿಂಗಪ್ಪ, ಶಿಕ್ಷಕರಾದ ಶಕುಂತಲಾ, ಇಂದಿರಮ್ಮ ಇತರರಿದ್ದರು. 
ಬಳ್ಳಾರಿ

ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಲಿ

ಪ್ರಮುಖ ಮುಖ್ಯಾಂಶಗಳು

  • ಸಿಆರ್‌ಪಿ ಎಂ.ಕರುಣಾಕರಾಚಾರ್ ಸಲಹೆ
  • ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ ಕಾರ್ಯಕ್ರಮ

ಕಂಪ್ಲಿ: ಗ್ರಾಮೀಣ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ಕೌಶಲವನ್ನು ವಿದ್ಯಾರ್ಥಿದೆಸೆಯಲ್ಲಿಯೇ ರೂಢಿಸಿಕೊಳ್ಳಬೇಕು ಎಂದು ದೇವಸಮುದ್ರ ಸಿಆರ್‌ಪಿ ಎಂ.ಕರುಣಾಕರಾಚಾರ್ ಹೇಳಿದರು.

ದೇವಸಮುದ್ರದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಂಡು ಗುಣಾತ್ಮಕ ಶಿಕ್ಷಣ ಗಳಿಸುವಲ್ಲಿ ವಿದ್ಯಾರ್ಥಿಗಳು ಜಾಗೃತಿವಹಿಸಬೇಕು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಮಾನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಮುಖ್ಯಶಿಕ್ಷಕ ಕೆ.ಯೋಗರಾಜ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಧುನಿಕ ಜ್ಞಾನವನ್ನು ಗಮನಿಸಿ, ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ನಿವೃತ್ತಶಿಕ್ಷಕ ನಾಗರಾಜ ದಬಾಡಿ, ಎಸ್ಡಿಎಂಸಿ ಅಧ್ಯಕ್ಷ ಸಣ್ಣ ನಿಂಗಪ್ಪ, ಶಿಕ್ಷಕರಾದ ಕೆ.ಮಲ್ಲಯ್ಯ ರುದ್ರಯ್ಯಮಠ, ಶಕುಂತಲಾ ಹಿರೇಮಠ, ಇಂದಿರಮ್ಮ, ಈರಮ್ಮ, ರಾಮಚಂದ್ರ ಚಿತ್ರಗಾರ, ಜಡೆಪ್ಪ, ಎಚ್.ಬಸವನಗೌಡ, ಮುತ್ತಣ್ಣ, ಎಫ್‌ಡಿಎ ವಂಶಿಕೃಷ್ಣ ಇತರರಿದ್ದರು.