ಮಹಾಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಕೊಟ್ಟೂರಿನ ಕೊಟ್ಟೂರೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರು ಸಾಲಿನಲ್ಲಿ ನಿಂತಿರುವುದು. 
ಬಳ್ಳಾರಿ

ಕೊಟ್ಟೂರೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರ ದಂಡು

ಪ್ರಮುಖ ಮುಖ್ಯಾಂಶಗಳು

  • ಶಿವರಾತ್ರಿ ಅಮಾವಾಸ್ಯೆ

ಕೊಟ್ಟೂರೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರ ದಂಡು

ಕೊಟ್ಟೂರು: ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಭಕ್ತರು ಮಂಗಳವಾರ ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದರು.
ಬ್ರಾಹ್ಮಿ ಮೂಹೂರ್ತದಿಂದಲೇ ಶ್ರೀ ಸ್ವಾಮಿಗೆ ರುದ್ರಾಭಿಷೇಕ, ಮಹಾಭಿಷೇಕ ಸೇರಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ದೇವಸ್ಥಾನದ ಇಕ್ಕೆಲಗಳಲ್ಲಿ ಭಕ್ತರು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಸಾಲಿನಲ್ಲಿ ನಿಂತು ದರ್ಶನ ಪಡೆದರು.
ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಭಕ್ತರ ವಾಹನ ನಿಲುಗಡೆಗೆ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲಿ ಅಡ್ಡದಿಡ್ಡಿಯಾಗಿ ವಾಹನ ನಿಲ್ಲಿಸಲಾಗಿತ್ತು. ಇದರಿಂದಾಗಿ ಕೂಡ್ಲಿಗಿ ಕಡೆ ಸಂಚರಿಸುವ ಮಾರ್ಗದಲ್ಲಿ ಸಂಚಾರ ಸಿಕ್ಕು ನಿರ್ಮಾಣವಾಗಿತ್ತು.