ನ್ಯಾಯಬೆಲೆ ಅಂಗಡಿಯಲ್ಲಿ ಬೆರಳಚ್ಚು ಬದಲು ಒಟಿಪಿ ಆಧರಿಸಿ ಜನರಿಗೆ ಪಡಿತರ ವಿತರಿಸುಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕುಡತಿನಿ ಗ್ರಾಮ ಘಟಕದಿಂದ ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.  
ಬಳ್ಳಾರಿ

ಒಟಿಪಿ ಆಧರಿಸಿ ಪಡಿತರ ವಿತರಿಸಿ

ಕುರುಗೋಡು: ನ್ಯಾಯಬೆಲೆ ಅಂಗಡಿಯಲ್ಲಿ ಬೆರಳಚ್ಚು ಬದಲು ಒಟಿಪಿ ಆಧರಿಸಿ ಜನರಿಗೆ ಪಡಿತರ ವಿತರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕುಡತಿನಿ ಗ್ರಾಮ ಘಟಕದಿಂದ ಮಂಗಳವಾರ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸಕೀನಾ ಹಾಗೂ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಲಾಯಿತು.
ಗ್ರಾಮ ಘಟಕದ ಅಧ್ಯಕ್ಷ ನಾಗಲಿಂಗ ಆಚಾರಿ ಮಾತನಾಡಿ, ಪಟ್ಟಣದಲ್ಲಿನ ನ್ಯಾಯಬೆಲೆ ಅಂಗಡಿಯಲ್ಲಿ ಬೆರಳಚ್ಚು ಪಡೆದು ಪಡಿತರ ವಿತರಿಸುವ ವ್ಯವಸ್ಥೆ ಇದೆ. ಆದರೆ ಶ್ರಮಜೀವಗಳ ಬೆರಳಚ್ಚು ಮಾಸಿರುವುದರಿಂದ ಸಕಾಲಕ್ಕೆ ಪಡಿತರ ಪಡೆಯಲಾಗುತ್ತಿಲ್ಲ. ಇದರಿಂದಾಗಿ ಜನರು ಕೆಲಸ ಬಿಟ್ಟು ವಾರಗಟ್ಟಲೆ ನ್ಯಾಯಬೆಲೆ ಅಂಗಡಿಗೆ ಅಲೆಯಬೇಕಿದೆ. ಸರ್ವರ್ ಸಮರ್ಪಕವಾಗಿ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಜನರು ರೋಸಿ ಹೋಗಿದ್ದಾರೆ ಎಂದು ದೂರಿದರು.