ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನ ಆವರಣದಲ್ಲಿ ಎಸ್‌ಐಆರ್ ಜಾಗೃತಿ ಅಂಗವಾಗಿ ತ್ರಿಚಕ್ರ ವಾಹನ ರ‌್ಯಾಲಿಗೆ ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಚಾಲನೆ ನೀಡಿದರು. ಜಿಪಂ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಪಂ ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ, ತಾಪಂ ಇಒ ಶ್ರೀಧರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಇದ್ದರು. 
ಬಳ್ಳಾರಿ

ಎಸ್‌ಐಆರ್‌ನಿಂದ ವಂಚಿತರಾಗದಿರಿ

ಪ್ರಮುಖ ಮುಖ್ಯಾಂಶಗಳು

  • ವಿಆರ್‌ಡಬ್ಲ್ಯೂ ಸಿಬ್ಬಂದಿ ಕಡ್ಡಾಯ
ಬಳ್ಳಾರಿ : ಜಿಲ್ಲೆಯ ಒಬ್ಬ ವಿಶೇಷಚೇತನರೂ ಎಸ್‌ಐಆರ್ ಪ್ರಕ್ರಿಯೆಯಿಂದ ವಂಚಿತರಾಗಬಾರದು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಹೇಳಿದರು. ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಅಂಗವಾಗಿ ತ್ರಿಚಕ್ರ ವಾಹನ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು.
ಇಲ್ಲದಿದ್ದರೆ 2002ರ ಮತದಾರರ ಪಟ್ಟಿಯಲ್ಲಿ ಮ್ಯಾಪಿಂಗ್ ಆಗದೇ ಇರುವವರ ಹೆಸರು ಮತದಾರರ ಪಟ್ಟಿಯಲ್ಲಿ ಕೈತಪ್ಪುವ ಸಂಭವವಿರುತ್ತದೆ. ಇದರಿಂದ ಸರ್ಕಾರಿ ಸೌಲಭ್ಯಗಳು ಸಿಗದಂತಾಗುತ್ತದೆ ಎಂದರು.
ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಮಾತನಾಡಿ, ಪ್ರತಿ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುವ ವಿಆರ್‌ಡಬ್ಲ್ಯೂ ಸಿಬ್ಬಂದಿ ಕಡ್ಡಾಯವಾಗಿ ಪ್ರತಿಯೊಂದು ಮನೆಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹೊಣೆ ನಿಮ್ಮದು ಎಂದರು. ರ‌್ಯಾಲಿಯು ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಆರಂಭಗೊಂಡು ಡಿಸಿ ಕಚೇರಿ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು.
===