ಹರಪನಹಳ್ಳಿಯಲ್ಲಿ ಭಾರತೀಯ ಕಿಸಾನ್ ಸಂಘಟನೆ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯ ಉಸ್ತುವಾರಿ ಚಂದ್ರಕಾಂತ ರೇವಣಸಿದ್ದ ಪಾಟೀಲ್, ಗೌರವಾಧ್ಯಕ್ಷ ಕಾಗದರ ಮೆಹಬೂಬ್ ಸಾಬ್, ಪ್ರಮುಖರಾದ ಈಡಿಗರ ಅಂಜಿನಪ್ಪ, ಕೆ.ಹೊನ್ನೂರು ಸ್ವಾಮಿ, ಸಂದೀಪ್ ಉಕ್ಕಿಣಗಟ್ಟಿ, ಲಕ್ಷ್ಮೀದೇವಿ ಇತರರಿದ್ದರು. 
ಬಳ್ಳಾರಿ

ಆಸೆಗೆ ಬಲಿಯಾಗದೆ ರೈತರ ಪರ ಧ್ವನಿಗೂಡಿಸಿ

ಹರಪನಹಳ್ಳಿ: ರೈತರು ಸಂಕಷ್ಟದಲ್ಲಿದ್ದಾಗ ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯದೊಂದಿಗೆ ಸಂಘಟನೆ ಸ್ಪಂದಿಸುತ್ತಿದೆ ಎಂದು ಭಾರತೀಯ ಕಿಸಾನ್ ಸಂಘಟನೆ ರಾಜ್ಯಾಧ್ಯಕ್ಷ ಗಿರಜ್ಜಿ ನಾಗರಾಜ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಭಾರತೀಯ ಕಿಸಾನ್ ಸಂಘಟನೆ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಆಸೆ, ಆಮಿಷಗಳಿಗೆ ಬಲಿಯಾಗದೆ ರಾಜ್ಯದ ರೈತರ ಪರವಾಗಿ ಧ್ವನಿ ಎತ್ತಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಇರುವುದರಿಂದ ರಾತ್ರಿ ವೇಳೆ ವಿದ್ಯುತ್ ವ್ಯತ್ಯಯವಾಗದಂತೆ ಹಾಗೂ ಬೇಸಿಗೆ ಹಿನ್ನೆಲೆಯಲ್ಲಿ ಹಿಂಗಾರು ಬೆಳೆಗಳಿಗೆ ಸಮರ್ಪಕ ವಿದ್ಯುತ್ ಒದಗಿಸಬೇಕು ಎಂದು ಒತ್ತಾಯಿಸಲಾಯಿತು. ಸಂಘಟನೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪೂರ್ಣಿಮಾ ಎಂ.ಕೆ.ಸ್ವಾಮಿ ಮಾತನಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಂಘಟನೆ ಬಲಪಡಿಸಲು ಎಲ್ಲರೂ ಕೈ ಜೋಡಿಸಿ ಎಂದು ತಿಳಿಸಿದರು.