ಬಳ್ಳಾರಿಯ ಬಿಡಿಡಿಎಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರ ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮವನ್ನು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಉದ್ಘಾಟಿಸಿದರು. ಮೇರಾ ಯುವ ಭಾರತ ಕೇಂದ್ರದ ಯುವ ಅಧಿಕಾರಿ ಬುಕ್ಕ ಸಂಜೀವ್, ಎಸ್‌ಜಿಆರ್‌ಸಿಎಂ ಕಾಲೇಜು ಪ್ರಾಂಶುಪಾಲ ಡಿ.ರಾಮಕೃಷ್ಣ, ಪ್ರೊ.ಮರಿ ಗಾದಿಲಿಂಗಪ್ಪ ಇತರರಿದ್ದರು. 
ಬಳ್ಳಾರಿ

ಕೌಶಲ ಶಿಕ್ಷಣಕ್ಕೆ ಒತ್ತು ನೀಡಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಕೌಶಲ
ಬಳ್ಳಾರಿ : ಯುವ ಪೀಳಿಗೆ ಕೌಶಲ ಚಟುವಟಿಕೆಗಳು ಅಳವಡಿಸಿಕೊಂಡಾಗ ಮಾತ್ರ ದೇಶಕ್ಕೆ ಅಮೂಲ್ಯವಾದ ಕೊಡುಗೆ ನೀಡಲು ಸಾಧ್ಯ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಹೇಳಿದರು.
ನಗರದ ಬಿಡಿಡಿಎಸ್ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಮೇರಾ ಯುವ ಭಾರತ ಹಾಗೂ ಬಿಡಿಡಿಎಸ್ ಸಹಯೋಗದೊಂದಿಗೆ ಆಯೋಜಿಸಿದ್ದ ಅಂತರ ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಪ್ರತಿ 50 ಕಿ.ಮೀ. ಗೆ ಭಾಷೆ, ಸಂಸ್ಕೃತಿ, ಆಹಾರ ಪದ್ಧತಿ ಬದಲಾವಣೆ ಕಾಣಬಹುದು. ಈಗಿನ ಯುವಕರಿಗೆ ಇವುಗಳ ಪರಿಚಯ ಉತ್ತಮ ಮನೋಭಾವನೆ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ. ಯುವಕರು ಕೌಶಲ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಕರೆ ನೀಡಿದರು.
===