ಕೂಡ್ಲಿಗಿ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಕೃಷಿ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ತಹಸೀಲ್ದಾರ್ ವಿ. ಕೆ.ನೇತ್ರಾವತಿ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ತಾಪಂ ಇಒ ನರಸಪ್ಪ, ಸರ್ಕಾರಿ ನೌಕರರ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತೇಜವರ್ಧನ, ಬಿಇಒ ಮೈಲೇಶ್ ಬೇವೂರು ಇದ್ದರು.
- ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿಕೆ
- ಕೂಡ್ಲಿಗಿ ಗಣರಾಜ್ಯೋತ್ಸವ ಕಾರ್ಯಕ್ರಮ
ಕೂಡ್ಲಿಗಿ: ಗಣರಾಜ್ಯೋತ್ಸವವನ್ನು ಸಂಕಲ್ಪದ ದಿನವನ್ನಾಗಿ ಆಚರಿಸಬೇಕಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಸಂವಿಧಾನವನ್ನು ರಚಿಸಿ ಎಲ್ಲ ರಾಜ್ಯಗಳನ್ನು ಒಗ್ಗೂಡಿಸಿ ಸಂವಿಧಾನದ ಆಶಯಗಳಿಗೆ ಬದ್ದರಾಗಿ ಆಡಳಿತ ನಡೆಸುವಂತೆ ಮಾಡಿದ್ದು ಇತಿಹಾಸ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕನಿಷ್ಠ ಸೌಲಭ್ಯಗಳನ್ನು ಒದಗಿಸಲು ಟೊಂಕ ಕಟ್ಟಿ ನಿಂತಿದ್ದು, ಈಗಾಗಲೇ ರಸ್ತೆಗಳು, ಕುಡಿಯುವ ನೀರು, ಕೃಷಿ ನೀರಾವರಿ, ವಸತಿ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಕ್ಷೇತ್ರದ ಸರ್ವರಿಗೂ ಬಲ ತುಂಬಿದ ಸಮಾಧಾನ ನನಗಿದೆ. ಕ್ಷೇತ್ರದಲ್ಲಿ ಎಂಟು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗಿದೆ. ಅಂಬೇಡ್ಕರ್, ಏಕಲವ್ಯ, ಕಿತ್ತೂರು ರಾಣಿ ಚನ್ನಮ್ಮ ಶಾಲೆಗಳಿಗೆ ನಿವೇಶನ ನೀಡಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ ಎಂದರು.
ತಹಸೀಲ್ದಾರ್ ವಿ.ಕೆ.ನೇತ್ರಾವತಿ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್, ಗೃಹ ರಕ್ಷಕದಳ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಕೃಷಿ ಸಾಧಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ತಾಪಂ ಇಒ ನರಸಪ್ಪ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಸಿಪಿಐ ಪ್ರಲ್ಹಾದ್ ಎಸ್.ಚನ್ನಗಿರಿ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಜಿಲಾನ್, ಬಿಇಒ ಮೈಲೇಶ್ ಬೇವೂರು, ಸಪಪೂ ಕಾಲೇಜಿನ ಪ್ರಾಚಾರ್ಯೆ ಟಿ.ಕೊತ್ಲಮ್ಮ, ಬಿಸಿಎಂ ಅಧಿಕಾರಿ ಶ್ಯಾಮಪ್ಪ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.