ಜಿ. ರವಿಕಿರಣ್ 
ಬಳ್ಳಾರಿ

ವಿದ್ಯಾರ್ಥಿನಿಗೆ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ

ಪ್ರಮುಖ ಮುಖ್ಯಾಂಶಗಳು

  • ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು
  • ಉಪನ್ಯಾಸಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ಬಳ್ಳಾರಿ : ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ಉಪನ್ಯಾಸಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿ. ರವಿಕಿರಣ್ ಎಂಬಾತನೇ ಆರೋಪಿತ ಉಪನ್ಯಾಸಕನಾಗಿದ್ದು, ಅದೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ಆರೋಪಿಯೂ ಕಳೆದ 2025ರಿಂದಲೇ ವಿದ್ಯಾರ್ಥಿನಿ ಜತೆ ಮೊಬೈಲ್‌ನಲ್ಲಿ ಚಾಟಿಂಗ್ ಮಾಡುತ್ತಿದ್ದ.
ದಿನ ಕಳೆದಂತೆ ಇಬ್ಬರ ನಡುವಿನ ಪರಿಚಯವು 2026ರ ಫೆಬ್ರವರಿ ವೇಳೆಗೆ ಪ್ರೇಮಕ್ಕೆ ತಿರುಗಿತ್ತು. ತನಗೆ ಮದುವೆಯಾಗಿದ್ದರೂ ಸಹ ಆ ವಿಷಯವನ್ನು ಮುಚ್ಚಿಟ್ಟು, ತನಗೆ ಮದುವೆಯಾಗಿಲ್ಲ ಎಂಬುದಾಗಿ ವಿದ್ಯಾರ್ಥಿನಿಯನ್ನು ನಂಬಿಸಿದ್ದ. ಇದೇ ನೆಪದಲ್ಲಿ ಉಪನ್ಯಾಸಕ ರವಿಕಿರಣ್ ಕಳೆದ ಹಲವು ದಿನಗಳಿಂದ ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಉಪನ್ಯಾಸಕನ ಈ ವರ್ತನೆಯಿಂದ ಮನನೊಂದ ವಿದ್ಯಾರ್ಥಿನಿ ಘಟನೆಯನ್ನು ಕುಟುಂಬದವರಿಗೆ ತಿಳಿಸಿದ್ದಾರೆ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಉಪನ್ಯಾಸಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
====