ಬಳ್ಳಾರಿಯ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು. ಡಿಎಚ್‌ಒ ಡಾ.ವೈ.ರಮೇಶಬಾಬು, ವೈದ್ಯಾಧಿಕಾರಿಗಳಾದ ಡಾ.ವೀರೇಂದ್ರ ಕುಮಾರ್, ಡಾ.ರಾಘವೇಂದ್ರ, ಡಾ.ಭಾವನ, ಡಾ.ರವಿಚಂದ್ರವರ್ಮ ಇತರರಿದ್ದರು. 
ಬಳ್ಳಾರಿ

ಭ್ರೂಣ ಪತ್ತೆ ಅಪರಾಧ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಅಪರಾಧ
ಬಳ್ಳಾರಿ : ಭ್ರೂಣಲಿಂಗ ಪತ್ತೆ ಹಚ್ಚುವುದು ಅಪರಾಧವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.
ಇಲ್ಲಿನ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿರುವ ಸ್ಕಾೃನಿಂಗ್ ಸೆಂಟರ್‌ಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾಲಕಾಲಕ್ಕೆ ತಮ್ಮ ಪರವಾನಗಿ ನವೀಕರಿಸಿಕೊಳ್ಳಬೇಕು. ಹೊಸದಾಗಿ ನೋಂದಣಿ ಮಾಡಿಕೊಳ್ಳುವವರು ಸೂಕ್ತ ಸಮಯದಲ್ಲಿ ಅರ್ಜಿ ಸಲ್ಲಿಸಬೇಕು ಎಂದರು.
ಬಳಿಕ ಸಭೆಯಲ್ಲಿ ಸ್ಕಾೃನಿಂಗ್ ಸೆಂಟರ್‌ಗಳ ಕಾರ್ಯವೈಖರಿ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ಕುರಿತು ಚರ್ಚಿಸಲಾಯಿತು.
===