- ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಬಳ್ಳಾರಿ : ನಗರದ ಪ್ರಮುಖ ರಸ್ತೆ ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ಟಾಸ್ಕ್ ಫೋರ್ಸ್ ಸಮಿತಿ ಅಧಿಕಾರಿಗಳು ಸೋಮವಾರ ದಾಳಿ ಐವರು ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.
ದಾಳಿಯ ವೇಳೆ ಕೆಲಸದಲ್ಲಿ ತೊಡಗಿದ್ದ ಐದು ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಮಕ್ಕಳ ವಯಸ್ಸಿನ ಅಧಿಕೃತ ದಾಖಲಾತಿಗಳನ್ನು ಪರಿಶೀಲಿಸಿದ ನಂತರ, ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಮಾಲೀಕರ ವಿರುದ್ಧ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.