ಬಳ್ಳಾರಿ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಐವರು ಮೃತಪಟ್ಟಿದ್ದಾರೆ.
ಮಿಂಚೇರಿ-ಹಲಕುಂದಿ ರಸ್ತೆಯಲ್ಲಿ ಮೋಟಾರ್ ಸೈಕಲ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸಂಡೂರು ತಾಲೂಕಿನ ಎಂ.ಬಸಾಪುರ ಗ್ರಾಮದ ಹನುಮಂತಪ್ಪ (40) ಮೃತಪಟ್ಟಿದ್ದಾರೆ. ಮತ್ತೊಂದು ಘಟನೆಯಲ್ಲಿ, ಹಳೆನೆಲ್ಲುಡಿ-ಎಮ್ಮಿಗನೂರು ರಸ್ತೆಯಲ್ಲಿ ಬೈಕ್‌ನಿಂದ ಬಿದ್ದು ತೀವ್ರ ಗಾಯಗೊಂಡಿದ್ದ ಮಲಪ್ಪ (40) ಎಂಬುವರು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ನಗರದ ಬಂಡಿಮೋಟ್ ಹತ್ತಿರ ರಸ್ತೆ ದಾಟುತ್ತಿದ್ದ ಮೋಹನ್ ರೆಡ್ಡಿ( 42)ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಮೃತಪಟ್ಟಿದ್ದಾರೆ. ಕುರುಗೋಡು ತಾಲೂಕಿನ ಮದಿರೆ ಕ್ರಾಸ್ ಬಳಿ ಸೈಕಲ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಚಾನಾಳ್ ಅಯ್ಯಪ್ಪ (35) ಎಂಬುವರು ಸಾವನ್ನಪ್ಪಿದ್ದಾರೆ. ಇಲ್ಲಿನ ಹೊರವಲಯದ ಲಕ್ಷ್ಮಿನಗರ ಕ್ಯಾಂಪ್ ಹತ್ತಿರ ಭಿಕ್ಷೆ ಬೇಡುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನಿಗೆ ಗುರುತು ಸಿಗದ ವಾಹನವೊಂದು ಡಿಕ್ಕಿ ಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಆಯಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಸುಮನ್ ಡಿ. ಪನ್ನೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.