ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಸಂಬಂಧಿಸಿದಂತೆ ಕಂಪ್ಲಿಯಲ್ಲಿ ವೀರಶೈವ ಸಂಘದ ಅಧ್ಯಕ್ಷ ಎಸ್.ಎಂ.ನಾಗರಾಜಸ್ವಾಮಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ನಡೆಯಿತು.
ಕಂಪ್ಲಿ: ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಸಂಬಂಧಿಸಿದಂತೆ ವೀರಶೈವ ಸಂಘದ ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು.
ವೀರಶೈವ ಸಂಘದ ತಾಲೂಕು ಅಧ್ಯಕ್ಷ ಎಸ್.ಎಂ.ನಾಗರಾಜಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಬೇಕಿದೆ. ಮೇ 9ರಂದು ಬೆಳಗ್ಗೆ 7ಗಂಟೆಗೆ ಪಟ್ಟಣದ ಶಾರದಾ ಶಾಲೆ ಆವರಣದಿಂದ ಮೂರು ಬಸ್‌ಗಳಲ್ಲಿ ತೆರಳಲು ತೀರ್ಮಾನಿಸಲಾಗಿದೆ. ಬಸ್ ಹಾಗೂ ಉಪಹಾರದ ವ್ಯವಸ್ಥೆ ಉಚಿತವಾಗಿರಲಿದೆ ಎಂದು ತಿಳಿಸಿದರು.
ಪ್ರಮುಖರಾದ ಕೆ.ಎಂ.ಹೇಮಯ್ಯಸ್ವಾಮಿ, ಇಟಗಿ ಬಸವರಾಜಗೌಡ, ಅಳ್ಳಳ್ಳಿ ವೀರೇಶ, ವಾಗೀಶ ಪಂಡಿತಾರಾಧ್ಯ, ಶಿವಪುತ್ರಪ್ಪ ಹೊನ್ನಳ್ಳಿ, ಪುಟ್ಟಿ ಸಚಿನ್, ರೇಣುಕಯ್ಯಸ್ವಾಮಿ, ವೀರಶೈವ ಸಂಘದ ಪದಾಧಿಕಾರಿಗಳು, ವೀರಶೈವ ಲಿಂಗಾಯತ ಸಮುದಾಯದವರಿದ್ದರು.