ಪ್ರೊ.ವಿ.ಲೋಕೇಶ 
ಬಳ್ಳಾರಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಿ

ರುದ್ರಪ್ಪ ವಾಲಿ

ಪ್ರಮುಖ ಮುಖ್ಯಾಂಶಗಳು

  • ಸಾಹಿತ್ಯ
  • ರಸ
  • ಸವಿಯುವ
ಬಳ್ಳಾರಿ: ಕಲಾವಿದರು ಪ್ರತಿಭೆಯನ್ನು ತೋರಿಸಿಕೊಳ್ಳಲು ಶ್ರಮವಹಿಸಬೇಕು ಎಂದು ವಿಎಸ್‌ಕೆ ವಿವಿ ಕುಲಸಚಿವ ಪ್ರೊ.ವಿ.ಲೋಕೇಶ ಹೇಳಿದರು.
ನಗರದ ವಿಎಸ್‌ಕೆ ವಿವಿ ಸಭಾಂಗಣದಲ್ಲಿ ರಮಣಿಕ ಗುಪ್ತ ಸ್ಮರಣಾರ್ಥ ಬುಧವಾರ ಆಯೋಜಿಸಿದ್ದ ರಾಷ್ಟ್ರಿಯ ರಂಗಭೂಮಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಾಮಾಜಿಕ ಮಾಧ್ಯಮಗಳು ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಿವೆ. ವಿವಿಯ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದರು.
ರಂಗ ನಿರ್ದೇಶಕ ಸಾಂಬಶಿವ ದಳವಾಯಿ ಮಾತನಾಡಿ, ಪ್ರತಿಯೊಬ್ಬರೂ ಸಾಹಿತ್ಯದ ರಸವನ್ನು ಸವಿಯುವ ಮೂಲಕ ಗುರುತಿಸಿಕೊಳ್ಳಬೇಕು. 10 ದಿನಗಳಲ್ಲಿ ನಾಟಕ ತರಬೇತಿ ಹಾಗೂ ನಾಟಕ ರಚನೆ ಸುಲಭದ ಮಾತಲ್ಲ. ನಾಟಕಕ್ಕೆ ನಿರ್ದಿಷ್ಟವಾದ ಸಮಯ ಬೇಕು. ಇಂತಹ ರಂಗಭೂಮಿ ಕಾರ್ಯಾಗಾರಗಳು ಮೈಸೂರು ಭಾಗದಲ್ಲಿ ನಡೆಯುತ್ತಿದ್ದವು. ಬಳ್ಳಾರಿಯಲ್ಲಿ ಆಯೋಜಿಸಿರುವುದು ಶ್ಲಾಘನೀಯ ಎಂದರು.
ಬಳಿಕ ಪ್ರೊ.ಶಾಂತನಾಯ್ಕೊ ರಚಿತ ‘ವೇರಾಳು’ ನಾಟಕ ಪ್ರದರ್ಶನ ಮಾಡಲಾಯಿತು. ತರಬೇತಿ ಶಿಬಿರದಲ್ಲಿ ವಿವಿಧ ಜಿಲ್ಲೆಗಳ 250ಕ್ಕೂ ಅಧಿಕ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.