ಸಂಡೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿಎಚ್‌ಒ ಡಾ.ವೈ.ರಮೇಶಬಾಬು ಅವರು ಮಗುವಿಗೆ ಲಸಿಕೆ ಹಾಕಿಸಿದ ಬಗ್ಗೆ ಮಾಹಿತಿ ಪಡೆದರು.  
ಬಳ್ಳಾರಿ

ತಪ್ಪದೆ ಪೋಲಿಯೋ ಲಸಿಕೆ ಹಾಕಿಸಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿ
  • ಪಾಲಕರು
  • ಪ್ರಾಥಮಿಕ
ಬಳ್ಳಾರಿ : ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಾಲಕರು ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ಎಚ್ಚರವಹಿಸಿ ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.
ಸಂಡೂರು ತಾಲೂಕಿನ ತಾರಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಆಯೋಜಿಸಿರುವ ಪಲ್ಸ್ ಪೋಲಿಯೋ ಲಸಿಕಾ ವಿತರಣೆ ಹಿನ್ನೆಲೆ ಮನೆ ಭೇಟಿ ಪರಿಶೀಲಿಸಿ ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಲಸಿಕೆಗಳಿಂದಾಗಿ, ಮಕ್ಕಳಿಗೆ ಬಾಲ್ಯದಲ್ಲಿ ಕಾಡುವ ರೋಗಗಳನ್ನು ಪರಿಣಾಮಕಾರಿಯಾಗಿ ತಡೆಯುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಜನತೆ ಲಸಿಕೆ ಬಗ್ಗೆ ಯಾವುದೇ ಸಂಶಯ ವ್ಯಕ್ತಪಡಿಸದೇ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲರೂ ಲಸಿಕೆ ಹಾಕಿಸಬೇಕು.ಇದರಿಂದ ಪೋಲಿಯೋ ವೈರಸ್‌ನಿಂದ ಜೀವನ ಪರ್ಯಂತ ಅಂಗವಿಕಲತೆ ತಡೆಯಬಹುದು ಎಂದರು.
===