ಬಳ್ಳಾರಿಯ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣದ ಸಭಾಂಗಣದಲ್ಲಿ ಆಯೋಜಿಸಿದ್ದ ಸಂತ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಉದ್ಘಾಟಿಸಿದರು. ಮೇಯರ್ ಪಿ.ಗಾದೆಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ, ನೇಕಾರರ ಸಮುದಾಯ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ದೇವಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇತರರಿದ್ದರು. === 
ಬಳ್ಳಾರಿ

ಮಹಿಳೆಯರಿಗೆ ವಿಶೇಷ ಸ್ಥಾನ ಕಲ್ಪಿಸಿ

ಪ್ರಮುಖ ಮುಖ್ಯಾಂಶಗಳು

  • ದಾಸಿಮಯ್ಯ
ಬಳ್ಳಾರಿ : ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಒದಗಿಸಿ, ಉತ್ತಮ ಜೀವನ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.
ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಸೋಮವಾರ ಆಯೋಜಿಸಿದ್ದ ಸಂತ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 11ನೇ ಶತಮಾನದಲ್ಲಿಯೇ ದೇವರ ದಾಸಿಮಯ್ಯರವರು ವಚನ ಸಾಹಿತ್ಯದ ಮೂಲಕ ಲಿಂಗ ತಾರತಮ್ಯ ಮಾಡುವುದು ತಪ್ಪು ಎಂಬುದಾಗಿ ಪ್ರತಿಪಾದಿಸಿದ್ದರು. ಈ ಕುರಿತು ಶಿವನ ಆರಾಧನೆಯ ಮೂಲಕ ಜನರಿಕೆ ತಿಳಿವಳಿಕೆ ನೀಡುತ್ತಿದ್ದರು ಎಂದರು.
ಪಾಲಿಕೆ ಮೇಯರ್ ಪಿ.ಗಾದೆಪ್ಪ ಮಾತನಾಡಿ, ವಚನಗಳಿಗೆ ಮನಃ ಪರಿವರ್ತನೆ ಮಾಡುವ ಶಕ್ತಿ ಹೊಂದಿವೆ. ಈ ನಿಟ್ಟಿನಲ್ಲಿ ದೇವರ ದಾಸಿಮ್ಯನವರ ವಚನಗಳ ಕುರಿತು ಎಲ್ಲರೂ ಅರಿತುಕೊಳ್ಳಬೇಕು. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬಾಳಬೇಕು ಎಂದು ಸಾರಿದವರು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ದೇವರ ದಾಸಿಮ್ಯನವರ ಕನಸಿನಂತೆ ಸಮಾಜದಲ್ಲಿ ಯಾರು ಕೂಡ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.
===